Categories
ಚಿಕ್ಕಮಗಳೂರು

ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ನಾಗೇಂದ್ರ ಈ.ಈ

ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ನಾಗೇಂದ್ರ ಈ.ಈ
– ಯುವ ಸಂಘಟಕನಿಗೆ ಒಲಿದ ಪಕ್ಷ ಸಂಘಟನೆ ಹುದ್ದೆ
– ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಆದೇಶ

ನಮ್ಮೂರ್ ಎಕ್ಸ್ ಪ್ರೆಸ್ ಮಲೆನಾಡು
ಚಿಕ್ಕಮಗಳೂರು: ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ಯುವ ಸಂಘಟಕರು, ಯುವ ಮುಖಂಡರು ಆದ ನಾಗೇಂದ್ರ ಈ.ಈ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಆದೇಶ ಮಾಡಿದ್ದಾರೆ.
ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾ ದಳವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವ ,ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ರವರುಗಳ ಆದೇಶದಂತೆ ತಕ್ಷಣ ಜಾರಿಗೆ ಬರುವಂತೆ ಚಿಕ್ಕಮಗಳೂರು ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ಕೊಪ್ಪ ತಾಲೂಕು ಭಂಡೀಗಡಿಯ ನಾಗೇಂದ್ರ ಈ.ಈ ಯವರನ್ನು ನೇಮಿಸಿ ಆದೇಶಿಸಲಾಗಿದೆ.

ಸಂಘಟಕನಿಗೆ ಒಲಿದ ಹುದ್ದೆ..!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿರುವ ನಾಗೇಂದ್ರ ಅವರು ಭಂಡಿಗಡಿ ಬೂತ್ ಅಧ್ಯಕ್ಷರಾಗಿ, ಕೊಪ್ಪ ತಾಲೂಕು ಯುವ ಜೆಡಿಎಸ್ ಕಾರ್ಯದರ್ಶಿಯಾಗಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಯುವ ಪ್ರಧಾನ ಕಾರ್ಯದರ್ಶಿಯಾಗಿ, ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲಾ ಕಾರ್ಯಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಜೆಡಿಎಸ್ ಪಕ್ಷದ ಸಂಘಟನೆ ಜತೆಗೆ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿರುವ ನಾಗೇಂದ್ರ ಅವರು ನಿಖಿಲ್ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಪರಿಷತ್ ಸದಸ್ಯರಾದ ಭೋಜೆ ಗೌಡರ ಸಂಘಟನೆಯಲ್ಲಿ ಪ್ರಮುಖರಾಗಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.