ಬಾಳೆಹೊನ್ನೂರು ಕರೆಂಟ್ ಶಾಕ್ಗೆ ನವ ವಿವಾಹಿತ ಲೈನ್ಮೆನ್ ಸಾವು
* ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್ಮೆನ್
* ವಿದ್ಯುತ್ ಕಂಬ ಹತ್ತಿ ಫ್ಯೂಸ್ ಹಾಕಿ,ದುರಸ್ಥಿ ಮಾಡುವ ವೇಳೆ ಘಟನೆ
NAMMMUR EXPRESS NEWS
ಬಾಳೆಹೊನ್ನೂರು: ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್ಮೆನ್ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪ್ರವೀಣ್ (26) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆಯ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲಿ ಲೈನ್ಮೆನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಹೊನ್ನೆಕೊಪ್ಪ ಗ್ರಾಮದಲ್ಲಿ ಕಂಬ ಹತ್ತಿ ಫ್ಯೂಸ್ ಹಾಕಿ ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ತೀವ್ರ ಅಸ್ವಸ್ತನಾಗಿ ಕಂಬದಿಂದ ಬಿದ್ದು ಒದ್ದಾಡುತ್ತಿದ್ದರು. ತಕ್ಷಣ ಅವರನ್ನು ಸ್ಥಳಿಯರು ಹಾಗೂ ಇತರೇ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಗೆ ಬರುವ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.