ಸೆ.1 ರಿಂದ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಆನ್‌ಲೈನ್ ಬುಕಿಂಗ್ ಕಡ್ಡಾಯ
* ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ ಹಿನ್ನೆಲೆ ಜಿಲ್ಲಾಡಳಿತದ ಕ್ರಮ
* ಆನ್‌ಲೈನ್ ಬುಕ್ಕಿಂಗ್ ಹೇಗೆ,ಶುಲ್ಕ,ಸಮಯ ಎಷ್ಟು ಮಾಹಿತಿ ಇಲ್ಲಿದೆ.
NAMMMUR EXPRESS NEWS
ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿಗೆ ಬರುವ ಪ್ರವಾಸಿಗರು ಇನ್ಮುಂದೆ ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್ ಮಾಡಿಕೊಂಡು ಬರಬೇಕು. ಸೆಪ್ಟೆಂಬರ್ 1ರಿಂದ ಈ ವ್ಯವಸ್ಥೆ ಜಾರಿಗೆ ಬರಲಿದ್ದು,
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ಇದನ್ನು ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
* ಆನ್‌ಲೈನ್ ಬುಕ್ಕಿಂಗ್ ಹೇಗೆ,ಶುಲ್ಕ,ಸಮಯ ಎಷ್ಟು? ಇಲ್ಲಿದೆ ಮಾಹಿತಿ
ಜಿಲ್ಲಾಡಳಿತದ ವೆಬ್‌ಸೈಟ್ ಲಿಂಕ್
https://chikkamagaluru.nic.in/en/tourism ಬಳಸಿ, ಶುಲ್ಕ ಬೈಕ್‌ಗಳಿಗೆ ₹50, ಕಾರುಗಳಿಗೆ ₹100, ತೂಫಾನ್ ವಾಹನ ₹150 ಮತ್ತು ಟೆಂಪೊ ಟ್ರಾವೆಲರ್ ₹200 ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕ್ಕಿಂಗ್ ಮಾಡಿಕೊಳ್ಳಬೇಕು.
ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಮೊದಲ ಅವಧಿ ಮತ್ತು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ತನಕ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದೆ. ಒಂದು ಅವಧಿಗೆ 600 ವಾಹನಗಳಿಗೆ (ದ್ವಿಚಕ್ರ ವಾಹನ/ಆಟೊರಿಕ್ಷಾ 100, ಸ್ಥಳೀಯ ಟ್ಯಾಕ್ಸಿ 100, ಟೆಂಪೊ ಟ್ರಾವೆಲರ್ 50, ತೂಫಾನ್ ವಾಹನ 50, ಪ್ರವಾಸಿಗರ ಕಾರು/ಜೀಪು/ಎಸ್‌ಯುವಿ 300) ಅವಕಾಶ ಇರಲಿದೆ ಮೊದಲು ಬುಕ್ಕಿಂಗ್ ಮಾಡಿಕೊಂಡವರಿಗೆ ಅವಕಾಶ ದೊರಕಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.