ಮಟನ್ ಪ್ರಿಯರಿಗೆ ಇದೀಗ ಎಚ್ಚರಿಕೆ..!
– ಚಿಕ್ಕಮಗಳೂರಿನ ಹೋಟೆಲ್ ನಲ್ಲಿ ಬಯಲಾಯ್ತು ದೊಡ್ಡ ದಂಧೆ
– 20 ಕೆಜಿ ಗೋ ಮಾಂಸ ವಶಕ್ಕೆ ಪಡೆದ ಪೊಲೀಸರು
NAMMUR EXPRESS NEWS
ಚಿಕ್ಕಮಗಳೂರು: ಮಟನ್ ಊಟವೆಂದು, ಗೋ ಮಾಂಸದ ಊಟ ನೀಡುತ್ತಿದ್ದ ಪ್ರತಿಷ್ಠಿತ ಹೋಟೆಲ್ ಗಳ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಹೋಟೆಲ್ ಮಾಲೀಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಎವರೆಸ್ಟ್ ಹೋಟೆಲ್ ಮಾಲೀಕ ಲತೀಫ್ ಮತ್ತು ಬೆಂಗಳೂರಿನ ಹೋಟೆಲ್ ಮಾಲೀಕ ಶಿವರಾಜ್ ಅವರನ್ನು ಬಂಧಿಸಿದ್ದಾರೆ.
ನಗರದ ಬೆಂಗಳೂರು ಹೋಟೆಲ್, ಎವರೆಸ್ಟ್ ಹೋಟೆಲ್ ಗಳು ಮಟನ್ ಬದಲು ಗೋಮಾಂಸದ ಖಾದ್ಯಗಳನ್ನ ನೀಡುತ್ತಿದ್ದವು ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಎವರೆಸ್ಟ್ ಹೋಟೆಲ್ ಮಾಲೀಕ ಲತೀಫ್ ಮತ್ತು ಬೆಂಗಳೂರಿನ ಹೋಟೆಲ್ ಮಾಲೀಕ ಶಿವರಾಜ್ ಅವರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20 ಕೆಜಿ ಗೋಮಾಂಸ ವಶಕ್ಕೆ:
ಮತ್ತೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ನ್ಯಾಮತ್ ಹೋಟೆಲ್ ನಲ್ಲಿ ಸಂಗ್ರಹಿಸಲಾಗಿದ್ದ 20 ಕೆಜಿ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಟೇಲ್ ಮಾಲೀಕ ಇರ್ಷಾದ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.