ಕಾಫಿನಾಡಲ್ಲಿ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಭಿಯಾನ
– ಇಂಧನ ಸಚಿವರು ಕಾಣೆ ಪೋಸ್ಟರ್
– ಏನಿದು ಪೋಸ್ಟರ್? ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ
NAMMUR EXPRESS NEWS
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶ ಹೊರಹಾಕಿ ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ನಗರದ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಧನ ಸಚಿವರು ಕಾಣೆ ಪೋಸ್ಟರ್
ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ಹಾಕಿದ್ದು, ಕೆ.ಜೆ.ಜಾರ್ಜ್ ಇಂಧನ ಸಚಿವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕಾಣೆಯಾಗಿದ್ದಾರೆ ಎಂದು ಪೋಸ್ಟ್ ಸಹಾ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ ರೀತಿಯ ಪೋಸ್ಟರ್ ಸಹಾ ಅಂಟಿಸಲಾಗಿದೆ. ಅದಕ್ಕೆ ಉತ್ತರ ಎಂಬಂತೆ ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇರೀ ಮ್ಯಾಮ್ ಎನ್ನುತ್ತಿರೋ ಇಂಧನ ಸಚಿವರ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು, ಇಂಧನ ಸಚಿವರ ಕಛೇರಿಗೆ ಅಂಟಿಸಿದ್ದ ಪೋಸ್ಟರ್ ಗಳನ್ನು ಸಿಬ್ಬಂದಿಗಳ ತೆರೆವುಗೊಳಿಸಿದ್ದು ಇನ್ನು ಸರ್ಕಾರಿ ಕಛೇರಿಗಳಲ್ಲಿ ಅಂಟಿಸಲಾಗಿದ್ದ ಪೋಸ್ಟರ್ ಗಳನ್ನ ಪೊಲೀಸರು ತೆರವುಗೊಳಿಸಿದ್ದಾರೆ.