Categories
ಚಿಕ್ಕಮಗಳೂರು

ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನಕ್ಕೆ ಸಿದ್ಧತೆ

ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನಕ್ಕೆ ಸಿದ್ಧತೆ
– ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್​ ಕಟ್ಟಿ ಅಲಂಕಾರ: ಡಿ​.14 ರಂದು ದತ್ತ ಪಾದುಕೆ ದರ್ಶನ
– ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್

NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಭಜರಂಗದಳ ಮತ್ತು ವಿಹೆಚ್​ಪಿ ನೇತೃತ್ವದಲ್ಲಿ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿದೆ. ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್​ ಕಟ್ಟಿ ಅಲಂಕಾರ ಮಾಡಲಾಗುತ್ತದೆ. ಭಜರಂಗದಳ, ವಿಹೆಚ್​ಪಿ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಡಿಸೆಂಬರ್ 6 ರಂದು ರಾಜ್ಯದಾದ್ಯಂತ ದತ್ತಮಾಲೆ ಧಾರಣೆ ಮಾಡುತ್ತಾರೆ. ಡಿಸೆಂಬರ್​ 12 ರಂದು ಅನಸೂಯಾ ಜಯಂತಿ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿಸೆಂಬರ್​​ 13 ರಂದು ಚಿಕ್ಕಮಗಳೂರು ನಗರದಲ್ಲಿ ‌ಬೃಹತ್ ಶೋಭಾಯಾತ್ರೆ ನೆರವೇರುತ್ತದೆ. ನಂತರ ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳು ಗುಹೆಯಲ್ಲಿನ ದತ್ತ ಪಾದುಕೆ ದರ್ಶನ ಪಡೆಯುತ್ತಾರೆ. ಈ ದಿನ ರಾಜ್ಯದ ಮೂಲೆಗಳಿಂದ ಸಾವಿರಾರು ದತ್ತಮಾಲಾಧಾರಿಗಳು ಇಲ್ಲಿಗೆ ಆಗಮಿಸುತ್ತಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ‌ಹೈ ಅಲರ್ಟ್ ಆಗಿದ್ದಾರೆ. ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಗೋರಿಗಳಿಲ್ಲ ಇದು ಹಿಂದೂಗಳ ಪವಿತ್ರ ದತ್ತಪೀಠ ಅನ್ನುತ್ತಿದ್ದರೇ, ಮುಸ್ಲೀಮರು ಬಾಬಾ ಬುಡನ್ ಜೊತೆ ದಾದಾಹಯಾತ್ ಖಲಂದರ್ ಸೇರಿದಂತೆ ಅವರ ಶಿಷ್ಯರ ಗೋರಿಗಳಿರುವ ಪವಿತ್ರ ಸ್ಥಳ ಎನ್ನುತ್ತಿದ್ದಾರೆ. ಹಿಂದೂ-ಮುಸ್ಲಿಂ ನಡುವಿನ ದೇವರ ಹೆಸರಿನ ಭೂ ವಿವಾದ 25 ವರ್ಷಗಳಿಂದ ಜೀವಂತವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.