ಕನ್ನಡ ಪರ ಸಂಘಟನೆಗಳಿಂದ ಶನಿವಾರ ಬಂದ್‌ಗೆ ಕರೆ
* ಉದ್ಯೋಗದಲ್ಲಿ ಕನ್ನಡಿಗರಿಗೆ 70% ರಷ್ಟು ಮೀಸಲಾತಿ
* ಕರ್ನಾಟಕದಲ್ಲಿ ಎಂ.ಇ.ಎಸ್ ನಿಷೇಧಿಸಿ
NAMMUR EXPRESS NEWS
ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೊಚ್ಚಿ ಗೆದ್ದಿರುವ ಕನ್ನಡಪರ ಸಂಘಟನೆಗಳು ಇದೇ ಮಾರ್ಚ್ 22 ಶನಿವಾರ ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು. ಅಂದು ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಅಲ್ಲದೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು.
ಇದೀಗ ಇಂತಹ ಪುಂಡಾಟಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಪುಂಡರನ್ನು ತಕ್ಷಣ ಗಡಿಪಾರು ಮಾಡಬೇಕು, ಕನ್ನಡಿಗರಿಗೆ ಉದ್ಯೋಗದಲ್ಲಿ ಶೇಕಡ 70ರಷ್ಟು ಮೀಸಲಾತಿ ನೀಡಬೇಕು ಹಾಗೂ ಕರ್ನಾಟಕದಲ್ಲಿ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.