ಸಿಎಂ,ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಕಾಫಿನಾಡಲ್ಲಿ ಪ್ರತಿಭಟನೆ
* ಜಿಲ್ಲಾ ಬಿಜೆಪಿ ವತಿಯಿಂದ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ
* 11 ಜನ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ಕಾರಣ – ಬಿಜೆಪಿ
NAMMMUR EXPRESS NEWS
ಚಿಕ್ಕಮಗಳೂರು: ಐಪಿಎಲ್‌ನಲ್ಲಿ ಟ್ರೋಫಿ ಗೆದ್ದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿದಲ್ಲಿ 11 ಜನ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಈ ಘಟನೆಗೆ ರಾಜ್ಯ ಸರ್ಕಾರದ ನಿರ್ಧಾರವೇ ಕಾರಣ,ಸಿ.ಎಂ, ಡಿಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಕಛೇರಿ ಪಾಂಚಜನ್ಯದಿಂದ ನಗರದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ,ಘಟನೆಗೆ ಕ್ರೆಡಿಟ್ ತೆಗೆದುಕೊಳ್ಳುವ ಸಲುವಾಗಿ ಸರ್ಕಾರ ತೆಗೆದುಕೊಂಡ ಅವಸರದ ನಿರ್ಧಾರವೇ ಕಾರಣ, ಇದರಿಂದ 11 ಜನ ಅಮಾಯಕ ಜೀವಗಳು ಬಲಿಯಾಗಿವೆ ಇದರ ನೈತಿಕ ಹೊಣೆ ಹೊತ್ತು ಸಿ ಎಂ ಹಾಗೂ ಡಿಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಭಾವಚಿತ್ರ ಪೋಸ್ಟರ್ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
