Categories
ಚಿಕ್ಕಮಗಳೂರು

ಶೃಂಗೇರಿ ಕ್ಷೇತ್ರದಾದ್ಯಂತ ಯುವ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಜನ್ಮದಿನ ಆಚರಣೆ

ಶೃಂಗೇರಿ ಕ್ಷೇತ್ರದಾದ್ಯಂತ ಯುವ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಜನ್ಮದಿನ ಆಚರಣೆ

* ಶಾಲಾ ಮಕ್ಕಳಿಗೆ ನೋಟ್ ಬುಕ್,ಅನಾಥಾಶ್ರಮಕ್ಕೆ ದಿನಸಿ ಸಾಮಾಗ್ರಿ,ಬೆಡ್‌ಶೀಟ್ ವಿತರಣೆ
* ಸಾಮಾಜಿಕ ಕಾರ್ಯದ ಮೂಲಕ ತಮ್ಮ ನಾಯಕನ ಜನ್ಮದಿನ ಆಚರಿಸಿದ ಯುವ ಕಾಂಗ್ರೆಸ್

NAMMMUR EXPRESS NEWS
ಶೃಂಗೇರಿ/ಕೊಪ್ಪ/ಎನ್.ಆರ್ ಪುರ: ಕಾಂಗ್ರೇಸ್ ನಾಯಕ ಸಂಸದ ರಾಹುಲ್ ಗಾಂಧಿ ಜನ್ಮದಿನವನ್ನು ಶೃಂಗೇರಿ ಕ್ಷೇತ್ರದಾದ್ಯಂತ ಶಾಲಾ ಮಕ್ಕಳಿಗೆ ನೋಟ್ ಬುಕ್,ಅನಾಥಾಶ್ರಮಕ್ಕೆ ದಿನಸಿ ಸಾಮಾಗ್ರಿ,ಬೆಡ್ ಶೀಟ್ ವಿತರಣೆ ಕಾರ್ಯದ ಮುಖೇನ ಯುವ ಕಾಂಗ್ರೆಸ್ ಆಚರಿಸಿದೆ.
ಶೃಂಗೇರಿ: ಶೃಂಗೇರಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯು ಸರ್ಕಾರಿ ಶಾಲಾ ಮಕ್ಕಳಿಗೆ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಕನ್ನಡದಲ್ಲಿ ಬರೆದಿರುವ ಸಂವಿಧಾನ ಪುಸ್ತಕ ವಿತರಿಸುವ ಮೂಲಕ ತಮ್ಮ ನಾಯಕನ ಜನ್ಮದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಪ್ರದೀಪ್ ಕಲ್ಲೊಳ್ಳಿ ಸೇರಿದಂತೆ ತಾಲೂಕಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.
ಕೊಪ್ಪ: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಕೊಪ್ಪ ವತಿಯಿಂದ ಸಮಿತಿಯ ಅಧ್ಯಕ್ಷ ನಿಜಾ಼ಮುದ್ದೀನ್ ನೇತೃತ್ವದಲ್ಲಿ ಬಂಢೀಗಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸುವ ಮೂಲಕ ರಾಹುಲ್ ಗಾಂಧಿ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾ ಚರಣ್, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನಿಲ್ ಬಂಢೀಗಡಿ,ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ಮತ್ತು ಶಾಲೆಯ ಶಿಕ್ಷಕರು ,ಎಸ್.ಡಿ.ಎಂ.ಸಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
ಎನ್.ಆರ್ ಪುರ : ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ತಾಲೂಕಿನ ಮತ್ತಿಮರದಲ್ಲಿರುವ ಅನಾಥಾಶ್ರಮಕ್ಕೆ ದಿನಸಿ ಸಾಮಾಗ್ರಿ ಹಾಗೂ ಬೆಡ್ ಶೀಟ್‌ಗಳನ್ನು ನೀಡುವುದರ ಮೂಲಕ ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ,ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ದುರ್ಗಾ ಚರಣ್,ಜಿಲ್ಲಾ ಯುವ ಕಾಂಗ್ರೆಸ್ ಮಂಜೇಶ್ ಗೌಡ,ಅಭಿಲಾಷ್ ಪುಟ್ಟು ಮನ್ನಾರಂಬಿಲ್,ಕೌಶಿಕ್ ಪಟೇಲ್,ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಜುಬೇದಾ ಸೇರಿದಂತೆ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು,ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.