ಚಿಕ್ಕಮಗಳೂರಲ್ಲಿ ಮಳೆ ಆರ್ಭಟ: ಹಲವೆಡೆ ಅವಾಂತರ!
– ಮೂಡಿಗೆರೆಯಲ್ಲಿ ಭತ್ತದ ಗದ್ದೆಯಲ್ಲಿ ವೃದ್ದೆ ಸಾವು
– ಹಲವೆಡೆ ಅಪಘಾತ: ವಾಹನಗಳ ಅಪಘಾತ
– ಭಾರೀ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತ
NAMMUR EXPRESS NEWS
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಎಲ್ಲೆಡೆ ಮಳೆಯಿಂದ ಮರಗಳು ಧರೆಗೆ ಉರುಳಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಾಲು ಜಾರಿ ಬಿದ್ದು ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ಹೇಮಾವತಿ ನದಿಯಲ್ಲಿ ಬಿದ್ದ ವೃದ್ಧೆಯ ಶವ ಪತ್ತೆಯಾಗಿದೆ. ವೃದ್ಧೆಯು ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಮೃತರನ್ನು ದಾರದಹಳ್ಳಿ ಗ್ರಾಮದ ದೇವಮ್ಮ (61) ಎಂದು ಗುರುತಿಸಲಾಗಿದೆ.
ಲಾರಿ ಮೇಲೆ ಬಿದ್ದ ಮರ: ಹಲವೆಡೆ ಧರೆ ಕುಸಿತ!
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕಳಸ, ಶೃಂಗೇರಿ, ಜಯಪುರ, ಚಿಕ್ಕಮಗಳೂರು, ಮೂಡಿಗೆರೆ ಸೇರಿ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆರೆ ಕಟ್ಟೆಯಲ್ಲಿ ಲಾರಿ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ನಡೆದಿದೆ.
ಇದನ್ನೂ ಓದಿ : ಛೇ.. ಎಂಥಾ ನೀಚ ಕೃತ್ಯ…ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್!
HOW TO APPLY : NEET-UG COUNSELLING 2023