Categories
ಚಿಕ್ಕಮಗಳೂರು

ಸರಣಿ ಅಪಘಾತ, ನಾಲ್ವರಿಗೆ ಗಾಯ..!!

ಸರಣಿ ಅಪಘಾತ, ನಾಲ್ವರಿಗೆ ಗಾಯ..!!
– ಢಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನುಜ್ಜುಗುಜ್ಜು
– ಗಾಯಾಳುಗಳು ಆಸ್ಪತ್ರೆಗೆ ದಾಖಲು

NAMMUR EXPRESS NEWS
ಮೂಡಿಗೆರೆ: ಲಾರಿ, ಓಮಿನಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದ, ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಹ್ಯಾಂಡ್‌ಪೋಸ್ಟ್ ಬಳಿ ಗುರುವಾರ ಸಂಜೆ ಘಟನೆ ನಡೆದಿದೆ. ಜನ್ನಾಪುರದಿಂದ ಮೂಡಿಗೆರೆ ಕಡೆಗೆ ತೆರಳುತ್ತಿದ್ದ ಓಮಿನಿ ಕಾರೊಂದು ಮುಂದೆ ಸಾಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದು, ನಂತರ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ ಹಿಂದೆ ಕುಳಿತಿದ್ದ ಮಹಿಳೆ ಹಾಗೂ ಓಮಿನಿ ಕಾರಿನಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಓಮಿನಿ ಕಾರಿನಲ್ಲಿದ್ದ ಚಾಲಕನ ಪತ್ನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗಾಯಗೊಂಡಿದ್ದ ನಾಲ್ವರನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ, ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ಮತ್ತು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.