ಮೋದಿಯವರ ಜನ್ಮ ದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ
– 15 ದಿನಗಳ ಕಾಲ ವಿವಿಧ ಸೇವಾ ಚಟುವಟಿಕೆ
– ಶೃಂಗೇರಿ, ಕೊಪ್ಪದಲ್ಲಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ
NAMMUR EXPRESS NEWS
ಶೃಂಗೇರಿ: ಪ್ರಧಾನಿ ನರೇಂದ್ರ ಮೋದಿಯವರ 74 ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ಹಮ್ಮಿಕೊಂಡಿರುವ ಹದಿನೈದು ದಿನಗಳ ಕಾಲ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶೃಂಗೇರಿ ಹಾಗೂ ಕೊಪ್ಪ ತಾಲೂಕಿನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶೃಂಗೇರಿಯ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ತಾಲೂಕಿನ ಬಿಜೆಪಿ ಕಾರ್ಯಕರ್ತರು,ಪ್ರಮುಖರು ಪಾಲ್ಗೊಂಡಿದ್ದರು.ಕಾರ್ಯಕ್ರಮ ಉದ್ಘಾಟಿಸಿದ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಲಕ್ಷ್ಮೀನಾರಯಣರವರು ರಕ್ತದಾನ ಮಹತ್ವ ಹಾಗೂ ಅದರಿಂದಾಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು. ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯವಕ್ತಾರರಾದ ಡಾ.ಬಿ ಶಿವಶಂಕರ್ ಪಾಲ್ಗೊಂಡು 58ನೇ ಬಾರಿ ರಕ್ತದಾನ ಮಾಡಿದರು, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಸಂಪೆಕೊಳಲು,ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶ್ರೇಯಸ್ ಕವಿಲುಕೊಡಿಗೆ, ತಾಲೂಕು ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ವಿಕಾಸ್ ಹಾಲ್ಮಕ್ಕಿ,ತಾಲೂಕು ಬಿಜೆಪಿ ಕಾರ್ಯದರ್ಶಿ ಸಚಿನ್ ಗುಬ್ಬಗೋಡು,ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ಮನು ಕೊಚ್ಚವಳ್ಳಿ ಹಾಗೂ ಯುವ ಮೋರ್ಚಾದ ಅನೇಕ ಪದಾಧಿಕಾರಿಗಳು ಮತ್ತು ಶೃಂಗೇರಿ ರಕ್ತದಾನಿಗಳು ತಂಡದ ಪ್ರಶಾಂತ್ ಉಪಸ್ಥಿತರಿದ್ದರು. ಒಟ್ಟು 18 ಯುನಿಟ್ ರಕ್ತ ಸಂಗ್ರವಾಯಿತು.
ಕೊಪ್ಪದಲ್ಲೂ ರಕ್ತದಾನ ಶಿಬಿರ
ಕೊಪ್ಪ: ರೋಟರಿ ಮಿಡ್ ಟೌನ್ ಬ್ಲಡ್ ಬ್ಯಾಂಕ್ ಶಿವಮೊಗ್ಗ ಮತ್ತು ಪ್ರಶಮನಿ ಆಸ್ಪತ್ರೆ ಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕು ಯುವ ಮೋರ್ಚಾ ಕೊಪ್ಪ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಕೊಪ್ಪ ತಾಲೂಕು ಬಿಜೆಪಿ ಅಧ್ಯಕ್ಷರಾದ ದಿನೇಶ್ ಹೊಸೂರು ಮತ್ತು ಪ್ರಶಮನಿ ಆಸ್ಪತ್ರೆಯ ಡಾ.ಉದಯ್ ಶಂಕರ್ ಉದ್ಘಾಟಿಸಿದರು. ತಾಲೂಕಿನ ಬಿಜೆಪಿ ಕಾರ್ಯಕರ್ತರು ಮೋದಿ ಬೆಂಬಲಿಗರು ರಕ್ತದಾನ ಮಾಡಿದರು. ಶಿಬಿರದಲ್ಲಿ ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ಶರತ್ ಬಿಳುಕೊಪ್ಪ,ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಪುಣ್ಯಪಾಲ್,ಯುವ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಶರತ್ ನಿಲುವಾಗಿಲು,ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾದ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದು ರಕ್ತದಾನ ಮಾಡಿದರು. ಒಟ್ಟು 40 ಯುನಿಟ್ ರಕ್ತ ಸಂಗ್ರಹವಾಯಿತು.
ನಾಳೆ ಯುವ ಮೋರ್ಚಾ ಚಿಕ್ಕಮಗಳೂರಿನ ಪಕ್ಷದ ಜಿಲ್ಲಾ ಕಛೇರಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿದೆ.