ಕಿರುತೆರೆ ಕಲಾವಿದ ನಂದನ್ ಶೃಂಗೇರಿ ಆತ್ಮಹತ್ಯೆ
* ಸದ್ಯ ಮಾಸ್ಟರ್ ಆನಂದ್ ನಿರ್ದೇಶನದ ಅಮ್ಮ ಬಂದ್ರು ವೆಬ್ ಸೀರಿಸ್‌ನಲ್ಲಿ ನಟನೆ
* ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ನಟ ನಂದನ್
NAMMMUR EXPRESS NEWS
ಶೃಂಗೇರಿ: ಕಿರುತೆರೆ ಕಲಾವಿದ ಶೃಂಗೇರಿ ಮೂಲದ ನಂದನ್ ಭಟ್(24) ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ತಾಲೂಕಿನ ಮೆಣಸೆ ಪಂಚಾಯಿತಿ ವ್ಯಾಪ್ತಿಯ ಮುಂಡಗೋಡು ಗ್ರಾಮದವರಾದ ನಂದನ್ ನಾಟಕ, ಕಿರುತೆರೆಗಳಲ್ಲಿ ಅಭಿನಯ ಮಾಡುತ್ತಿದ್ದರು.
ಬೆಂಗಳೂರಿನ ಮಾಸ್ಟರ್ ಆನಂದ್ ನಿರ್ದೇಶನದ ಅಮ್ಮ ಬಂದ್ರು ಸೇರಿದಂತೆ ವೆಬ್ ಸೀರಿಸ್‌ಗಳಲ್ಲಿ ನಟಿಸುತ್ತಿದ್ದರು. ಕಳೆದ ವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವಿವಾಹಿತರಾಗಿದ್ದ ಇವರು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿ ಸುರೇಶ್‌ರವರ ಪುತ್ರ.
ಮಾಸ್ಟರ್ ಆನಂದ್ ಸ್ಟುಡಿಯೋಸ್‌ನಲ್ಲಿ ರಿಲೀಸ್ ಆಗುತ್ತಿದ್ದ ಅಮ್ಮ ಬಂದ್ರು ವೆಬ್ ಸಿರೀಸ್‌ನಲ್ಲಿ ನಂದನ್ ಭಟ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಹಲವಾರು ಎಪಿಸೋಡ್‌ಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಜುಲೈ 5ರ ಎಪಿಸೋಡ್‌ನಲ್ಲಿ ನಂದನ್ ಭಟ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸೀರೀಸ್‌ನಲ್ಲಿ ಮಾಸ್ಟರ್ ಆನಂದ್ ಹಾಗೂ ಅವರ ಪುತ್ರಿ ವಂಶಿಕಾ ಜೊತೆ ನಂದನ್ ಭಟ್ ನಟಿಸಿದ್ದರು. ಆದರೆ ಇವರ ಸಾವಿಗೆ ಕಾರಣವೇನು ಅನ್ನೋದು ಇನ್ನೂ ಕುತೂಹಲವಾಗಿಯೇ ಉಳಿದುಕೊಂಡಿದೆ.