ಶೃಂಗೇರಿ ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
– ಪಾಲಕರು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಸಾವು
– ಹೆಜ್ಜೇನು ದಾಳಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
– ತರೀಕೆರೆ ಸಮೀಪ ಬಸ್ ಅಪಘಾತ ಬಾಲಕ ಸಾವು
NAMMUR EXPRESS NEWS
ಶೃಂಗೇರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೃಂಗೇರಿಯ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃಂಗೇರಿ ತಾಲ್ಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿಯ ಸುರಕ್ಷಾ (19) ಆತ್ಮಹತ್ಯೆ ಮಾಡಿಕೊಂಡವರು. ಶೃಂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಶೃಂಗೇರಿ ಹಾಸ್ಟೆಲ್ ಅಲ್ಲಿದ್ದ ವಿದ್ಯಾರ್ಥಿನಿ ಹಬ್ಬಕ್ಕೆ ಮನೆಗೆ ತೆರಳಿದ್ದಾಗ, ಪಾಲಕರು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಿತೀಯ ಬಿ.ಎ ವ್ಯಾಸಂಗ ಮಾಡುತಿದ್ದ, ಅವರು ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಮನೆಯಲ್ಲಿ ವಿಷ ಸೇವಿಸಿದ್ದು, ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ.
ಹೆಜ್ಜೇನು ದಾಳಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೂಡಿಗೆರೆ : ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಗುರುವಾರ ನಡೆದಿದೆ. ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. 10 ಜನರ ಮೇಲೆ ದಾಳಿ ನಡೆಸಿದೆ. ವಿನೋದ, ಪುಷ್ಪ, ಪ್ರೇಮ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ಕಡಿತಕ್ಕೊಳಗಾದ ಉಳಿದವರು ಚಿಕಿತ್ಸೆ ಪಡೆದು ಮನೆಗಳಿಗೆ ಮರಳಿದ್ದಾರೆ.
ತರೀಕೆರೆ ಸಮೀಪ ಬಸ್ ಅಪಘಾತ ಬಾಲಕ ಸಾವು
ತರೀಕೆರೆ: ಸಮೀಪ ಬೆಟ್ಟದಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ನಡೆದ ಬಸ್ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟು,11 ಜನರು ಗಾಯೊಂಡಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬಸ್ ಅಪಘಾತದಲ್ಲಿ ಗುಬ್ಬಿ ಮೂಲದ ಪ್ರಮೋದ್ (7) ಎಂಬ ಬಾಲಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಬಸ್ನಲ್ಲಿದ್ದ ಭಾಗ್ಯ, ಚಿಕ್ಕನರಸಿಂಹಯ್ಯ, ಮಣಿ, ರಂಗಯ್ಯ, ಅಂಬಿಕಾ, ನಾಗರಾಜ್, ನಿರ್ಮಲಾ, ಪಾಲಾಕ್ಷಮ್ಮ, ರವೀಂದ್ರ, ಸುರೇಶ್, ಸಚಿನ್ ಗಾಯಗೊಂಡು, ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.