ಶೃಂಗೇರಿ,ಕೊಪ್ಪ ತಹಶೀಲ್ದಾರ್ರಿಂದ ಮರಳು ಅಡ್ಡೆ ಮೇಲೆ ದಾಳಿ
* ಮರಳು ದಂಧೆಯಲ್ಲಿ ತೊಡಗಿದ್ದ 4 ಪಿಕಪ್ ವಶಕ್ಕೆ
* ಶೃಂಗೇರಿ ಭಾಗದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಅಕ್ರಮ ಮರಳು ದಂಧೆ
NAMMMUR EXPRESS NEWS
ಶೃಂಗೇರಿ: ಶೃಂಗೇರಿ ತಹಶೀಲ್ದಾರ್ ಅನೂಪ್ ಹಾಗೂ ಕೊಪ್ಪ ತಹಶೀಲ್ದಾರ್ ಲಿಖಿತಾ ಮೋಹನ್ ರಿಂದ ಏಕಕಾಲಕ್ಕೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಮರಳು ದಂಧೆಯಲ್ಲಿ ತೊಡಗಿದ್ದ 4 ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ತಡರಾತ್ರಿ 2 ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ.ಶೃಂಗೇರಿ ಭಾಗದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಅಕ್ರಮ ಮರಳು ಮಾಫಿಯಾಗೆ ಕಳೆದ ಕೆಲವು ತಿಂಗಳಿಂದ ಸ್ವಲ್ಪ ಬ್ರೇಕ್ ಬಿದ್ದಿತ್ತು, ಆದರೆ ಸದ್ದಿಲ್ಲದೇ ಕಳೆದ ಒಂದು ತಿಂಗಳಿನಿಂದ ಮತ್ತೆ ಪ್ರಾರಂಭವಾಗಿದೆ. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ತಹಶೀಲ್ದಾರ್ ಅನೂಪ್ ಹಾಗೂ ಕೊಪ್ಪ ತಹಶೀಲ್ದಾರ್ ಲಿಖಿತಾ ಮೋಹನ್ 4 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇನ್ನೂ ಹಲವು ಪಿಕಪ್ ವಾಹನಗಳು ಇದ್ದು ದಾಳಿ ಸಂದರ್ಭದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ದಾಳಿಯಲ್ಲಿ ಅಡ್ಡಗದ್ದೆ ಬಷೀರ್, ಗಣೇಶ್, ನಾಗೇಶ್, ಅಜ್ಜೊಳ್ಳಿ ರಾಘು ಈ ನಾಲ್ವರಿಗೆ ಸೇರಿದ ಒಟ್ಟು 4 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.
