ಲೋಕಸಭಾ ಚುನಾವಣೆಗೆ ಸುಧಾಕರ್ ಶೆಟ್ಟಿ ಅಖಾಡಕ್ಕೆ!
– ಚಿಕ್ಕಮಗಳೂರು ಉಡುಪಿ ಕ್ಷೇತ್ರದಿಂದ ಸ್ಪರ್ಧೆ ಮನಸು
– ಟಿಕೆಟ್ ನೀಡುವಂತೆ ವರಿಷ್ಠರಿಗೆ ಕೇಳುತ್ತೇನೆ: ಸುಧಾಕರ್ ಶೆಟ್ಟಿ
NAMMUR EXPRESS NEWS
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಕಣ ನಿಧಾನಕ್ಕೆ ರಂಗೇರಿದೆ. ಈಗಲೇ ಟಿಕೆಟ್ ರಾಜಕೀಯ ಶುರುವಾಗಿದೆ. ಈ ನಡುವೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಚುನಾವಣೆಗೆ ಜೆಡಿಎಸ್ಸಿನಿಂದ ಆಕಾಂಕ್ಷಿಯಾಗಿದ್ದೇನೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿದೆ.
ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಕೃಷಿ ಸಚಿವರಾಗಿದ್ದಾರೆ. ಇದೀಗ ಲೋಕಸಭಾ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಿದೆ. ಈ ನಡುವೆ ಸುಧಾಕರ್ ಶೆಟ್ಟಿ ಅವರ ಹೇಳಿಕೆ ಮಹತ್ವ ಪಡೆದಿದೆ.
ಟಿಕೆಟ್ ಕೊಟ್ರೆ ಸ್ಪರ್ಧೆ ಮಾಡುತ್ತೇನೆ!:
ನಾನು ಪಕ್ಷದ ನಿಷ್ಠಾವಂತ ಕಟ್ಟಾಳು, ನನಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಕೇಳುತ್ತೇನೆ, ಚಿಕ್ಕಮಗಳೂರು ಹಾಗೂ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದ್ದೇನೆ. ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದೆ ಆದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಹಾಗೂ ಪಕ್ಷದ ನಿರ್ಧಾರಕ್ಕೆ ನಾನು ಬದ್ದನಾಗಿರುತ್ತೇನೆ ಎಂದರು.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023