ಟಾಪ್ 3 ನ್ಯೂಸ್
ಮುಳ್ಳಯ್ಯನಗಿರಿ ತಪ್ಪಲು 4 ದಿನ ಬಂದ್!
– ಡಿಸೆಂಬರ್ 11 ರಿಂದ 14 ವರೆಗೆ ನಾಲ್ಕು ದಿನ ಪಶ್ಚಿಮ ಘಟ್ಟ ಬಂದ್
– ಚಿಕ್ಕಮಗಳೂರು : 60 ಅಡಿ ಆಳದ ಬಾವಿಗೆ ಬಿದಿದ್ದರು ಬದುಕಿ ಬಂದ 94 ವರ್ಷದ ವೃದ್ಧೆ!
– ಚಿಕ್ಕಮಗಳೂರು: ಎಲ್ಲಾ ತಾಲೂಕಿನಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್
NAMMUR EXPRESS NEWS
ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ, 4 ದಿನ ಮುಳ್ಳಯ್ಯನಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಲಾಗಿದ್ದು, ಡಿಸೆಂಬರ್ 11 ರಿಂದ 14 ವರೆಗೆ ನಾಲ್ಕು ದಿನ ಪಶ್ಚಿಮ ಘಟ್ಟಗಳ ಸಾಲು ಬಂದ್ ಆಗಲಿದೆ. 4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ನೀಡಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 12—13–14 ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ನಡೆಯಲಿದೆ ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 15 ಬೆಳಗ್ಗೆ 10 ಗಂಟೆ ಬಳಿಕ ಚಿಕ್ಕಮಗಳೂರು ತಾಲೂಕಿನ ಪಶ್ಚಿಮಘಟ್ಟಗಳ ಸಾಲು ಮುಳ್ಳಯ್ಯನಗಿರಿ, ದತ್ತಪೀಠ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.
– ಚಿಕ್ಕಮಗಳೂರು : 60 ಅಡಿ ಆಳದ ಬಾವಿಗೆ ಬಿದಿದ್ದರು ಬದುಕಿ ಬಂದ 94 ವರ್ಷದ ವೃದ್ಧೆ!
ಚಿಕ್ಕಮಗಳೂರು: 60 ಅಡಿ ಬಾವಿಗೆ ಬಿದ್ದರೂ ಅಜ್ಜಿಯೊಬ್ಬರು ಬದುಕುಳಿದ ಘಟನೆ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಮಲ (94) ವರ್ಷದ ವೃದ್ಧೆ ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದರು. ಈ ವೇಳೆ ಬಾವಿಯೊಳಗೆ ಇದ್ದ ಪೈಪ್ ಹಿಡಿದುಕೊಂಡು ನೀರಲ್ಲಿ ಮುಳುಗದೇ ಸುಮಾರು 1 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿ ಕೊನೆಗೂ ಗೆದ್ದಿದ್ದಾರೆ.
ಬಾವಿಯೊಳಗೆ ಬಿದ್ದಿದ್ದ ವೃದ್ಧೆಯನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಮೇಲೆತ್ತಿದ್ದಾರೆ. ಅಗ್ನಿ ಶಾಮಕದಳದ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
– ಚಿಕ್ಕಮಗಳೂರು: ಎಲ್ಲಾ ತಾಲೂಕಿನಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ ಮತ್ತು ಕಡೂರು ತಾಲ್ಲೂಕು ವ್ಯಾಪ್ತಿಯಲ್ಲಿ ದಿನಾಂಕ 13.12.2024 ಬೆಳಿಗ್ಗೆ 6 ರಿಂದ 14.12.2024 ರಾತ್ರಿ 11 ಗಂಟೆಯವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.