ಮಧ್ಯರಾತ್ರಿ ಚಾರ್ಮಾಡಿ ಘಾಟ್ ಬಳಿ ಕೆಟ್ಟುನಿಂತ ಬಸ್!
– 70ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟದಲ್ಲಿ: ಒಂದೇ ಟ್ವೀಟ್ ಸಮಸ್ಯೆ ಪರಿಹರಿಸಿತು… ಹೇಗೆ?
-ಗಾಂಜಾ, ಇಸ್ಪೀಟ್, ಕೋಳಿ ಅಂಕ: ಹಲವರ ಅರೆಸ್ಟ್
– ಕಾಫಿ ನಾಡ ಬರ ಅಧ್ಯಯನಕ್ಕೆ ಬಂತು ತಂಡ!
NAMMUR EXPRESS NEWS
ಚಿಕ್ಕಮಗಳೂರು: ಸಾಮರ್ಥ್ಯಕ್ಕೂ ಮೀರಿ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಧರ್ಮಸ್ಥಳದಿಂದ ಗದಗದ ಮುಂಡರಗಿಗೆ ತೆರಳುತ್ತಿದ್ದ ಬಸ್ಸೊಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಕೆಎಸ್ಆರ್ಟಿಸಿ ಸಹಾಯವಾಣಿಗೆ ಕರೆ ಮಾಡಿ ಎಷ್ಟೇ ಸಂಪರ್ಕಿಸಲು ಪ್ರಯತ್ನಿಸಿದರೂ ಎರಡು ಗಂಟೆಗಳ ಕಾಲ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕೊನೆಗೆ ಪ್ರಯಾಣಿಕರಲ್ಲೊಬ್ಬರಾದ ರಘು ಎಂಬುವರು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವಿಟ್ ಮಾಡಿ ಸಹಾಯ ಕೇಳಿದ್ದಾರೆ.
ಚಾರ್ಮಾಡಿ ಘಾಟ್ ಬಳಿ ಬಸ್ ಕೆಟ್ಟುಹೋದ ಕಾರಣ 70ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದರು.
ಧರ್ಮಸ್ಥಳದಿಂದ ಹೊರಟ ಬಸ್ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಈ ಸಮಯದಲ್ಲಿ ಈ ಮಾರ್ಗದಲ್ಲಿ ಬೇರೆ ಯಾವುದೇ ಬಸ್ಸುಗಳಿಲ್ಲ. ದಯವಿಟ್ಟು ಸಹಾಯ ಮಾಡಿ,
ಮಳೆ ಬಂದರೆ ಏನು ಗತಿ? ಎಂದು ಟ್ವಿಟ್ ಮಾಡಿದ್ದಾರೆ. ಅಲ್ಲದೆ ಬಸ್ ಕೆಟ್ಟು ಹೋದ ಪರಿಣಾಮ ರಸ್ತೆ ಬದಿ ಪ್ರಯಾಣಿಕರು ವಿಶ್ರಾಂತಿ ಪಡೆಯುತ್ತಿದ್ದ ಫೋಟೋವನ್ನು ಟ್ವಿಟ್ನಲ್ಲಿ ಹಂಚಿಕೊಂಡಿದ್ದಾರೆ ಅಂತಾ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ರಘು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವಿಟ್ ಮಾಡಿ ಸಹಾಯ ಕೇಳಿದ ಬಳಿಕ ತಕ್ಷಣವೇ ಬಸ್ ವ್ಯವಸ್ಥೆ ಮಾಡಲಾಯಿತು.
ಗಾಂಜಾ ಮಾರಾಟ: ಓರ್ವನ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆ.ಬಿ.ಹಾಳ್ ಗ್ರಾಮದ ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ನಡೆದಿದೆ.ಸೆನ್ ಅಪರಾಧ ಪೊಲೀಸ್ ಠಾಣೆ ಮತ್ತು ತಂಡ ವಶಕ್ಕೆ ಪಡೆದುಕೊಂಡು ಆರೋಪಿಯಿಂದ 155 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ
ಕಾಡಲ್ಲಿ ಕೋಳಿ ಅಂಕ ಆಡುತ್ತಿದ್ದ ಆರೋಪಿಗಳ ಬಂಧನ!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಆಲ್ದುರು ವ್ಯಾಪ್ತಿಯ ಕಂಚಿನಕಲ್ ದುರ್ಗದ ಸಮೀಪ ಜೂಜಾಟದಲ್ಲಿ ತೊಡಗಿದ್ದ 12 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕಾಡುಮಲ್ಲಿಗೆ .ಪಿ.ಎಸ್.ಐ. ನ.ರಾ.ಪುರ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ 6 ಜನರನ್ನು ವಶಕ್ಕೆ ಪಡೆದು, 2,850/- ನಗದು, 4 ಕೋಳಿ ಹುಂಜ ಮತ್ತು ಕೋಳಿ ಕಾಲಿಗೆ ಕಟ್ಟುವ ಕತ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಸ್ಪೀಟ್ ಆಡುತ್ತಾ ಕುಳಿತ 6 ಮಂದಿ ಅರೆಸ್ಟ್!
ಬಾಳೆಹೊನ್ನೂರು: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಡಬಗೆರೆಯ ಗಾಡಿಬಿದ್ದ ಹಳ್ಳದ ಬಳಿ ಭಾನುವಾರ ರಾತ್ರಿ ನಡೆದಿದೆ. ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 11 ಆರೋಪಿಗಳು ಜೂಜಾಟದಲ್ಲಿ ತೊಡಗಿದ್ದು ಐವರು ಪರಾರಿಯಾಗಿದ್ದಾರೆ. ಇನ್ನು ಬಂಧಿತರಿಂದ 7,600 ರೂ. ಹಣ ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪಿಎಸ್ಐ ವಿ.ಟಿ.ದಿಲೀಪ್ ಕುಮಾರ್ ತಿಳಿಸಿದ್ದಾರೆ.
ಬರ ಪರಿಶೀಲನೆಗೆ ತಂಡ ರಚನೆ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಅಜ್ಜಂಪುರ, ಕಡೂರು, ತರೀಕೆರೆ ತಾಲೂಕಿನಲ್ಲಿ ಬರ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಈ ವರ್ಷ ಕಡಿಮೆ ಮಳೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇವಲ 54% ಮಳೆಯಾಗಿದೆ ಎಂದು ತಿಳಿಸಿದ್ದಾರೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.