ಟಾಪ್ ನ್ಯೂಸ್ ಚಿಕ್ಕಮಗಳೂರು
– ಚಿಕ್ಕಮಗಳೂರು: KSRTC ಬಸ್ ಹರಿದು ವೃದ್ಧೆ ಸಾವು
– ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು ಪ್ರಕರಣ, ಮೂವರ ವಿರುದ್ಧ ದೂರು ದಾಖಲು.
– ಮೂಡಿಗೆರೆ : ವಾಹನದ ಸಂಚಾರ ದಟ್ಟಣೆ,ಸವಾರರು ತೊಂದರೆ
NAMMUR EXPRESS NEWS
ಚಿಕ್ಕಮಗಳೂರು: ವೃದ್ಧೆಯೊಬ್ಬರ ಮೇಲೆ KSRTC ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) KSRTC ಬಸ್ ಹರಿದು ಸಾವನ್ನಪ್ಪಿರುವ ವೃದ್ಧೆ ಬಸ್ ಟರ್ನ್ ಮಾಡುವಾಗ KSRTC ಬಸ್ ವೃದ್ಧೆಗೆ ಗುದ್ದಿದ್ದು, ಬಸ್ಸಿನ ಮುಂಭಾಗದ ಚಕ್ರಕ್ಕೆ ವೃದ್ಧೆ ಸಿಲುಕಿದ್ದಾರೆ. ವೃದ್ಧೆಯ ಹೊಟ್ಟೆಯ ಮೇಲೆ ಬಸ್ ಚಕ್ರ ಹತ್ತಿದ ಪರಿಣಾಮ ಹೊಟ್ಟೆಯಿಂದ ಕರುಳು ಹೊರಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಕೂಡಲೇ ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದರೆ. ಚಿಕಿತ್ಸೆ ಪಡೆಯಲು ಪುಟ್ಟಮ್ಮ ಚಿಕ್ಕಮಗಳೂರಿನ ಆಸ್ಪತ್ರೆಗೆ ಬಂದಿದ್ದರು. ವಾಪಾಸ್ ಗ್ರಾಮಕ್ಕೆ ತೆರಳಲು ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
– ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು ಪ್ರಕರಣ, ಮೂವರ ವಿರುದ್ಧ ದೂರು ದಾಖಲು.
ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೀಟಮ್ಮ ಗ್ಯಾಂಗ್ʼನ ಒಂದು ಸಲಗ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅರಣ್ಯಾಧಿಕಾರಿ ಹರೀಶ್ ದೂರು ನೀಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮೆಸ್ಕಾಂನ ಜ್ಯೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿರುದ್ದ ಪ್ರಕರಣ ದಾಖಲಾಗಿದೆ.
– ಮೂಡಿಗೆರೆ : ವಾಹನದ ಸಂಚಾರ ದಟ್ಟಣೆ,ಸವಾರರು ತೊಂದರೆ
ಮೂಡಿಗೆರೆ: ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ತನ್ನೊಳ ರಸ್ತೆಯಲ್ಲಿ ವಾಹನದ ದಟ್ಟಣೆ ಸಾಮಾನ್ಯವಾಗಿದ್ದು, ಸವಾರರು, ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆ, ಶಾಲೆ, ಅಂಬೇಡ್ಕರ್ ಭವನ ಸೇರಿದಂತೆ ಹಲವು ಪ್ರಮುಖ ಕೇಂದ್ರಗಳಿಗೆ ತತ್ಕಳ ರಸ್ತೆಯ ಮೂಲಕವೇ ಸಾಗಬೇಕು. ಹುಲ್ಲೇಮನೆ, ಎಸ್ಟೇಟ್ ಕುಂದೂರು, ಭೈರಿಗದ್ದೆ, ಭಟ್ರುಗದ್ದೆ, ಕಣಗದ್ದೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೂ ಇದಾಗಿದ್ದು, ಸಂಚಾರ ದಟ್ಟಣೆಯಿಂದ ಜನರು ಹೈರಾಣಾಗಿದ್ದಾರೆ. ಶಾಲೆ ಪ್ರಾರಂಭವಾಗುವಾಗ ಸಮಯ ಹಾಗೂ ಶಾಲೆ ಬಿಡುವ ಸಮಯದಲ್ಲಂತೂ ವಾಹನಗಳು ಸಾಲುಗಟ್ಟಿ ರಸ್ತೆಯಲ್ಲಿ ನಿಲ್ಲಬೇಕಿದೆ. ವಾಹನ ದಟ್ಟಣೆಗೆ ಹೆದರಿ, ಈ ಮಾರ್ಗದಲ್ಲಿ ಬಾಡಿಗೆಗೆ ಬರಲು ಚಾಲಕರು ಹಿಂದೇಟು ಹಾಕುತ್ತಿದ್ದಾರೆ.
‘ರಸ್ತೆಯ ಒಂದು ಬದಿಯಲ್ಲಿ ವಾಹನಗಳ ನಿಲುಗಡೆ ಮಾಡಲಾಗುತ್ತದೆ. ಇದರಿಂದ ಎರಡು ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ವಾಗ್ವಾದ, ಅಪಘಾತ ಸಾಮಾನ್ಯವಾಗಿದೆ. ಬಸ್ ನಿಲ್ದಾಣದಿಂದ ಹೊಯ್ಸಳ ಕ್ರೀಡಾಂಗಣದ ತಿರುವಿನವರೆಗೂ ಏಕಮುಖ ರಸ್ತೆಯನ್ನಾಗಿಸಿ, ಗ್ರಾಮೀಣ ಭಾಗದಿಂದ ಬರುವ ವಾಹನಗಳು ಹೊಯ್ಸಳ ಕ್ರೀಡಾಂಗಣದ ಪಕ್ಕದ ರಸ್ತೆಯ ಮೂಲಕ ಕಾಲೇಜು ರಸ್ತೆಗೆ ತಲುಪಿ ಬಸ್ ನಿಲ್ದಾಣಕ್ಕೆ ಬಂದರೆ ವಾಹನ ದಟ್ಟಣೆ ಕಡಿಮೆಯಾಗುತ್ತದೆ’ ಎನ್ನುವುದು ಸ್ಥಳೀಯರ ಅಭಿಪ್ರಾಯ.