Categories
ಚಿಕ್ಕಮಗಳೂರು

ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಚಿಕ್ಕಮಗಳೂರು ಟಾಪ್ ನ್ಯೂಸ್

* ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್
* ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಮೇಲೆ ಕಲ್ಲೆಸೆದ ದುಷ್ಕರ್ಮಿಗಳು
* ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕ್‌ಅಪ್

NAMMMUR EXPRESS NEWS
* ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್
ಮೂಡಿಗೆರೆ: ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್‌ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದೆ.
ಭಾರೀ ಗಾಳಿಯ ಹೊಡೆತಕ್ಕೆ ಘಾಟಿಯ ಮೂರನೇ ತಿರುವಿನ ಬಳಿ ಮರವೊಂದು ಬಿದ್ದು ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಮಾರು ಮೂರೂ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಒಂದು ಗಂಟೆ ಬಳಿಕ ಸ್ಥಳಕ್ಕೆ ಹೋದ ಜೆಸಿಬಿಯಿಂದ ತೆರವು ಕಾರ್ಯ ನಡೆಯುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

* ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಮೇಲೆ ಕಲ್ಲೆಸೆದ ದುಷ್ಕರ್ಮಿಗಳು
ಕಡೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಹಾಗೂ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್‌ ಕೆಂಪರಾಜು ಅವರ ಮನೆಯ ಮುಂದಿದ್ದ ಹೂವಿನ ಕುಂಡಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಇನ್ನೋವಾ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಪರಿಣಾಮ ಗಾಜು ಪುಡಿಪುಡಿಯಾಗಿದೆ.
ಅಲ್ಲದೆ ಕಾರಿನ ಬಾನೆಟ್, ಬಂಪರ್ ಒಡೆದು ಹಾಕಿ ರಾತ್ರೋರಾತ್ರಿ ಕಿಗೇಡಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಡೂರು ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು,ಆರೋಪಿಗಳ ಪತ್ತೆಗೆ ಬಲೆ ಬೀಸಿದಾರೆ.

* ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕ್‌ಅಪ್ 
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ
ಪಿಕಪ್ ವಾಹನವೊಂದು ಬಿದ್ದಿರುವ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ನಡೆದಿದೆ.
ಭಾನುವಾರ ನಡೆದ ಘಟನೆಯಲ್ಲಿ ಪಿಕಪ್ ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 30 ಆಳದ ಕಂದಕ್ಕೆ ಪಿಕಪ್ ವಾಹನ ಉರುಳಿ ಬಿದ್ದಿದೆ.
ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.