ಯೂಥ್ ಕಾಂಗ್ರೆಸ್ ಅಧ್ಯಕ್ಷ ಮತ್ತವರ ಬೆಂಬಲಿಗರಿಂದ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ
* ರಾತ್ರಿ 1 ಗಂಟೆಗೆ ಎಣ್ಣೆ ಕೊಡಲಿಲ್ಲವೆಂದು ಹಲ್ಲೆ
* ಯೂಥ್ ಕಾಂಗ್ರೆಸ್ ಅಧ್ಯಕ್ಷ ಸೇರಿ 7 ಜನರ ವಿರುದ್ಧ ಸುಮೋಟೋ ಕೇಸ್ ದಾಖಲು
NAMMUR EXPRESS NEWS
ಕೊಪ್ಪ: ಬಾರ್ ಕ್ಯಾಷಿಯರ್ ಮೇಲೆ ಕೊಪ್ಪ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಆತನ ಸಹಚರರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಮತ್ತು ಸದಸ್ಯ ರಾಶ್ಚಿಕ್ ಹಾಗೂ ಸಹಚರರು ಹಲ್ಲೆ ನಡೆಸಿದ್ದಾರೆ. ತಡ ರಾತ್ರಿ 1 ಗಂಟೆಗೆ ಬಾರ್ ಕ್ಯಾಷಿಯರ್ ಎಣ್ಣೆ ನೀಡಲು ನಿರಾಕರಿಸಿದ ಕಾರಣದಿಂದಾಗಿ, ವಿಜಯಾನಂದ ಮತ್ತು ಸಹಚರರು ಕ್ಯಾಷಿಯರ್‌ಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಘಟನೆ ಸಂಬಂಧ ಕೊಪ್ಪ ಠಾಣೆಯಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸೇರಿ ಒಟ್ಟು 7 ಜನರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ಈ ಹಿಂದೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಜಿಲ್ಲಾ ಅಧ್ಯಕ್ಷ ಅಂಶುಮಂತ್ ಅವರ ವಿರುದ್ಧ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಲು ಮತ್ತು ಪಕ್ಷ ನಿಷ್ಠರನ್ನು ನೇಮಕ ಮಾಡಲು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಗಿತ್ತು.