- ನವೆಂಬರ್ನಲ್ಲಿ ಚಿತ್ರೀಕರಣ ಶುರು
ಬೆಂಗಳೂರು: ಕನ್ನಡದ ಯುವ ನಟ ಧ್ರುವ ಸರ್ಜಾ ಈಗ ದುಬಾರಿ ನಟ!. ಧ್ರುವ ಸರ್ಜಾ ನಾಯಕಾರಲಿಗಲಿರುವ ನಂದಕಿಶೋರ್ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತ ನಗರದ ದೇವಾಲಯವೊಂದರಲ್ಲಿ ನೆರವೇರಿದೆ. ಅದರ ಹೆಸರು ದುಬಾರಿ!.
ವಾಸವಿ ಎಂಟರ್ಪ್ರೈಸಸ್ ಅಡಿಯಲ್ಲಿ ಉದಯ್ ಕೆ.ಮೆಹ್ತಾ ಪೆÇ್ರಡಕ್ಸನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ, ಧ್ರುವ ಸರ್ಜಾ ನಾಯಕತ್ವದ ನೂತನ ಸಿನಿಮಾ ದುಬಾರಿಯ ಮುಹೂರ್ತ ಮತ್ತು ಶೀರ್ಷಿಕೆ ಅನಾವರಣ ನವರಂಗ ಗಣೇಶ್ ದೇವಸ್ಥಾನದಲ್ಲಿ ನೆರವೇರಿದೆ.
ಹಿರಿಯ ನಟ ದೊಡ್ಡಣ್ಣ ಮತ್ತು ನಟಿ ತಾರಾ ಆಗಮಿಸಿ ತಂಡದ ಮುಹೂರ್ತಕ್ಕೆ ಚಾಲನೆ ನೀಡಿ, ಕ್ಲಾಪ್ ಮಾಡಿದರು. ಇನ್ನುಳಿದಂತೆ ಚಿತ್ರದ ಬಹುತೇಕ ಕಲಾವಿದರು ಮತ್ತು ತಾಂತ್ರಿಕ ವರ್ಗ ಇದೇ ವೇಳೆ ಹಾಜರಾಗಿತ್ತು. ಸದ್ಯ ಮುಹೂರ್ತ ಮುಗಿಸಿಕೊಂಡಿರುವ ಚಿತ್ರತಂಡ, ಇದೇ ತಿಂಗಳ ಕೊನೆಯ ವಾರದಲ್ಲಿ ಚಿತ್ರೀಕರಣಕ್ಕೆ ನಿರ್ಧರಿಸಿದೆ.
ಪೆÇಗರು ಸಿನಿಮಾ ನಿರ್ದೇಶನ ಮಾಡಿರುವ ನಂದ ಕಿಶೋರ್, ದುಬಾರಿ ಚಿತ್ರಕ್ಕೂ ಆಕ್ಷನ್,ಕಟ್ ಹೇಳಲಿದ್ದು, ಈಗಾಗಲೇ ಚಿತ್ರಕಥೆ ಎಲ್ಲವೂ ಅಂತಿಮವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ ಉದಯ್ ಮೆಹ್ತಾ, ಪ್ರೀ ಪೆÇ್ರಡಕ್ಷನ್ ಕೆಲಸಗಳು ಬಹುತೇಕ ಎಲ್ಲವೂ ಮುಗಿದಿವೆ. ಇನ್ನೇನಿದ್ದರೂ ಶೂಟಿಂಗ್ ಶುರು ಮಾಡುವುದಷ್ಟೇ ಕೆಲಸ. ಇದೇ ತಿಂಗಳ ಕೊನೆಯಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದೇವೆ. ಬೆಂಗಳೂರು, ಮಂಡ್ಯ ಮತ್ತು ವಿದೇಶದ ಹಲವೆಡೆ ಶೂಟಿಂಗ್ ನಡೆಯಲಿದೆ ಎಂದಿದ್ದಾರೆ.