ಭೈರಪ್ಪ ಅವರ ಪರ್ವ ಕಾದಂಬರಿ ಈಗ ಸಿನಿಮಾ!
– ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನ
NAMMUR EXPRESS NEWS
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ ಆಕ್ಷನ್ – ಕಟ್ ಹೇಳಲಿದ್ದಾರೆ.
ಪಲ್ಲವಿ ಜೋಶಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರಲಿದೆ.
ಶನಿವಾರದಂದು ಭೈರಪ್ಪನವರು ಮೈಸೂರಿನಲ್ಲಿ ಈ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದ್ದು, ಈ ಸಂದರ್ಭದಲ್ಲಿ ನಿರ್ಮಾಪಕಿ ಪಲ್ಲವಿ ಜೋಶಿ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಹಿರಿಯ ನಟ ಪ್ರಕಾಶ್ ಬೆಳವಾಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭೈರಪ್ಪನವರ ‘ಪರ್ವ’ ಕಾದಂಬರಿಯನ್ನು ಸಿನಿಮಾ ಮಾಡುವಂತೆ ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ಕರೆ ಮಾಡಿ ತಿಳಿಸಿದ್ದರು. ಇದೀಗ ಇದಕ್ಕೆ ಕಾಲ ಕೂಡಿ ಬಂದಿದ್ದು, ಈ ಸಿನಿಮಾ ಮೂರು ಭಾಗಗಳಲ್ಲಿ ಬರಲಿದೆ ಎಂದು ತಿಳಿಸಿದರು. ಒಂದು ಪಾತ್ರದಲ್ಲಿ ನಟ ಯಶ್ ನಟನೆ ಮಾಡಲಿದ್ದಾರೆ ಎಂಬ ಚರ್ಚೆಯೂ ಇದೆ.