-30 ಲಕ್ಷ ರೂ ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯವಾದ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈಗ ದೇಶಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಕೂಡ ಜೋರಾಗಿ ನಡೆಯುತ್ತಿದೆ. ಈಗಾಗಲೇ ಅನೇಕ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಈಗ ಆ ಸಾಲಿಗೆ ತೆಲುಗು ನಟ, ಜನ ಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಕೂಡ ಸೇರಿಕೊಂಡಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ಅವರು 30 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ನಟ, ಜನ ಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಶುಕ್ರವಾರ (ಜ.22) 30 ಲಕ್ಷ ರೂ.ಗಳ ಚೆಕ್ ಅನ್ನು ಅಯೋಧ್ಯ ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ಮಾಜಿ ಸಚಿವ ಕಾಮಿನೇನಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಚೆಕ್ ಅನ್ನು ಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟವರಿಗೆ ನೀಡಿದ್ದಾರೆ. ಜೊತೆಗೆ ಪವನ್ 11 ಸಾವಿರ ರೂ.ಗಳ ಇನ್ನೊಂದು ಚೆಕ್ ಅನ್ನು ನೀಡಿದ್ದಾರೆ. ಇದು ಅವರ ಸಿಬ್ಬಂದಿ ನೀಡಿದ ಹಣವಾಗಿದೆ ಎನ್ನಲಾಗಿದೆ.