- ಕನ್ನಡ ಚಿತ್ರ ರಂಗಕ್ಕೆ ಮತ್ತೊಂದು ಶಾಕ್
- ಅಪಘಾತದಲ್ಲಿ ತೀವ್ರ ತಲೆಗೆ ಪೆಟ್ಟು ಬಿದ್ದು ಸಾವು
- ಕರೋನಾ ಸಂಕಷ್ಟದಲ್ಲಿರುವವರಿಗೆ ಫುಡ್ ಕಿಟ್ ಕೊಟ್ಟು ವಾಪಾಸ್ ಆಗುತ್ತಿದ್ದ ವೇಳೆ ಅಪಘಾತ
NAMMUR EXPRESS
ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ನಟನಾಗಿದ್ದ ಸಂಚಾರಿ ವಿಜಯ್(38) ಅಪಘಾತಕ್ಕೆ ಬಲಿಯಾಗಿದ್ದಾರೆ.
ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ವಿಜಯ್ ಮೆದುಳು ಕೆಲಸ ಮಾಡುತ್ತಿರಲಿಲ್ಲ. ಗಂಭೀರ ಗಾಯಗೊಂಡ ವಿಜಯ್ ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶನಿವಾರ ಕರೋನಾ ಸಂಕಷ್ಟದಲ್ಲಿರುವ ಜನತೆಗೆ ಫುಡ್ ಕಿಟ್ ಕೊಟ್ಟು ವಾಪಾಸ್ ಬರುತ್ತಿದ್ದ ವೇಳೆ ಬೈಕ್ ಅಪಘಾತ ಆಗಿತ್ತು. ಸೋಮವಾರ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಾಹಿತಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್, ನಟ ಸಂಚಾರಿ ವಿಜಯ್ ಇನ್ನಿಲ್ಲ ಎಂಬುದನ್ನು ನೆನಪಿಸಿಕೊಳ್ಳಲು ಕೂಡ ಆಗುತ್ತಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ಬಾರಿ ನಾನು ಅವರು ಭೇಟಿಯಾಗಿದ್ದೆವು. ಅಲ್ಲದೇ ಅವರ ಮುಂದಿನ ಚಿತ್ರದ ಬಗ್ಗೆಯೂ ಕುತೂಹಲ ಮೂಡಿತ್ತು. ಮುಂದಿನ ಚಿತ್ರ ಬಿಡುಗಡೆ ಮುನ್ನವೇ ಅವರು ಇನ್ನಿಲ್ಲವಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಕೋರಿದ್ದಾರೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ, ಬ್ರೈನ್ ಸ್ಟ್ರೋಕ್ ಉಂಟಾಗಿ, ಅವರು ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದ್ದರು. ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಕುಟುಂಬದವರಿಗೆ ತಿಳಿಸಿದ್ದಾರೆ.ಕುಟುಂಬಸ್ಥರು ನಟ ಸಂಚಾರಿ ವಿಜಯ್ ಅಂಗಾಗ ದಾನ ಮಾಡುವಂತ ನಿರ್ಧಾರವನ್ನು ಕೈಗೊಂಡಿರೋದಾಗಿ ಪ್ರಕಟಿಸಿದ್ದರು.
ಅಪ್ರತಿಮ ಕಲಾವಿದ!: ಭಾರತೀಯ ರಂಗಭೂಮಿ ಮತ್ತು ಸಿನೆಮಾ ಕಲಾವಿದರಾಗಿದ್ದು ಪ್ರಮುಖವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸಿನೆಮಾದಲ್ಲಿಯೂ ಕೆಲಸ ಮಾಡಿದ್ದರು. 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ, ಇವರಿಗೆ ಕನ್ನಡದ ನಾನು ಅವನಲ್ಲ…ಅವಳು ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದ್ದು, ಈ ಚಿತ್ರದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ. ಇದೇ ಪಟ್ಟಿಯಲ್ಲಿ, ಮುಖ್ಯ ಪಾತ್ರ ನಿರ್ವಹಿಸಿದ್ದ ಮತ್ತೊಂದು ಸಿನೆಮಾ ಹರಿವು, ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು.
2007ರಲ್ಲಿ ಚಿತ್ರರಂಗ ಪ್ರವೇಶ ಮಾಡಿದ್ದ ವಿಜಯ್ ಇದೀಗ ಬಾರದ ಲೋಕಕ್ಕೆ ಪಯಣಿಸಿದ್ದಾರೆ.
ಕನ್ನಡ ಸಿನಿಮಾ ಲೋಕದ ಎಲ್ಲಾ ಗಣ್ಯರು ಸೇರಿದಂತೆ ಎಲ್ಲಾ ಕ್ಷೇತ್ರದ ಪ್ರಮುಖರು ಕಂಬನಿ ಮಿಡಿದಿದ್ದಾರೆ.