ಬೆಂಗಳೂರು : ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುದೀಪ್ ಅವರ ಹೆಸರಿನಲ್ಲಿ ಎರಡು ಪತ್ರಗಳು ಬಂದಿದ್ದು, ಮಾನಹಾನಿ ಮಾಡುವಂತಹ ಕೆಲಸಕ್ಕೆ ಪತ್ರ ಬರೆದವರು ಕೈ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಇದೀಗ ದೂರಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಸುದೀಪ್ ಕೋರ್ಟ್ ಮೆಟ್ಟಿಲೇರಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದಿದ್ದಾರೆ. ದೂರಿಗೆ ಸಂಬಂಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ 21ನೇ ಸಿಸಿಹೆಚ್ ನ್ಯಾಯಾಲಯ ಆದೇಶ ನೀಡಿದೆ. ಪ್ರಕರಣದ ಬಗ್ಗೆ ಕಿಚ್ಚ ಸುದೀಪ್ ಪರ ವಕೀಲ ಚನ್ನಬಸಪ್ಪ ವಾದ ಮಂಡಿಸಿದ್ದರು. ಬೆದರಿಕೆ ಪತ್ರದ ತನಿಖೆಯ ಜವಾಬ್ದಾರಿ ಇದೀಗ ಸಿಸಿಬಿ ಹೆಗಲಿಗೆ ಬಿದ್ದಿದ್ದು, ಮುಂದೆ ಏನು ಬೆಳವಣಿಗೆಯಾಗಲಿದೆ ಎಂದು ಕಾದು ನೋಡಬೇಕಿದೆ.
Related Posts
Add A Comment