ಏನೇನ್ ಆಯ್ತು ದರ್ಶನ್ ಸ್ಟೋರಿ..!
– ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್ ಸಿಗ್ನಲ್
– ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್ ಸೂರ್ಯಗೂ ನೋಟೀಸ್, ವಿಚಾರಣೆ
– ದರ್ಶನ್ ಅಭಿಮಾನಿಗಳಿಂದಪ್ರಥಮ್ ಗೆ ಜೀವ ಬೆದರಿಕೆ ಕರೆ: ಕೇಸ್
– ಠಾಣೆಗೆ ಬಂದು ದರ್ಶನ್ ನೋಡಿದ ಪತ್ನಿ ವಿಜಯಲಕ್ಷ್ಮಿ
– ದರ್ಶನ್ ಬಗ್ಗೆ ಕೋಡಿ ಮಠದ ಶ್ರೀ ಹೇಳಿದ ಭವಿಷ್ಯ ಏನು?
– ನಾಪತ್ತೆಯಾಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಕೊನೆಗೂ ಪತ್ತೆ.!
NAMMUR EXPRESS NEWS
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಐಡಿಯಲ್ ಹೋಮ್ಸ್, ದರ್ಶನ್, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿತ್ತು.ನೋಟಿಸ್ ನೀಡಿದ್ದರಿಂದ ದರ್ಶನ್ ಮತ್ತಿತರರು ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್ನಲ್ಲಿ ತೆರವು ಮಾಡದಂತೆ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್ ಸೂರ್ಯಗೂ ನೋಟೀಸ್, ವಿಚಾರಣೆ
ನಟ ದರ್ಶನ್ ಜೊತೆ ರೇಣುಕಾ ಕೊಲೆಯಾದ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್ ವಿಚಾರಣೆ ನೋಟೀಸ್ ಹೋಗಿದೆ.
ನಟ ಯಶಸ್ ಸೂರ್ಯ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್ಗೂ ನೋಟೀಸ್ ನೀಡಲಾಗಿದೆ. ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಕರೆ : ದೂರು ದಾಖಲು!
ನಟ ದರ್ಶನ್ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್ ಅಭಿಮಾನಿಗಳಿಂದ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ನಟ ಪ್ರಥಮ್ ಅವರು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ, ನಾನು ತುಂಬಾ ಶಾಂತಿಯಿಂದಲೇ ಇದ್ದೆ;ನೀವು ಅತೀಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ ಆಫೀಸ್ ನಂಬರ್ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ, ಇನ್ನು ನನಗೆ ಬರೋ ಕಾಲ್ ಮೆಸೇಜ್ ಈ ಸೋಶಿಯಲ್ ಮೀಡಿಯಾ ವಾರ್ನಿಂಗ್ ಪೋಲೀಸರು ನೋಡಿಕೊಳ್ತಾರೆ, ಬದುಕು ಸುಂದರವಾದದ್ದು.ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ, ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ, ಕನ್ನಡಕ್ಕಾಗಿ,ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಕೊನೆಗೂ ಪತ್ತೆ.!
ನಾಪತ್ತೆಯಾಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಕೊನೆಗೂ ಪತ್ತೆಯಾಗಿದ್ದ ಎನ್ನಲಾಗಿದೆ. ಸದ್ಯ ಆತ ಗೋವಾದಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿತ್ತು.
ಪ್ರೇಮ ಬರಹ ಸಿನಿಮಾದ ವಿರತಣಾ ಜವಾಬ್ದಾರಿಯನ್ನು ತೂಗುದೀಪಾ ಪ್ರೊಡಕ್ಷನ್ಸ್ಗೆ ನೀಡಲಾಗಿತ್ತು. ಅದರ ಸಂ ಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು ಮಲ್ಲಿಕಾರ್ಜುನ್ ಅವರೇ. ಸಿನಿಮಾ ಹಕ್ಕು ವಿತರಿಸಿ, ಹಣ ಬಂದ ನಂತರ ಮಲ್ಲಿಕಾರ್ಜುನ್ ಹಣ ತೆಗೆದುಕೊಂಡು ಪರಾರಿಯಾಗಿದ್ದ. ಸುಮಾರು 7 ವರ್ಷಗಳ ಹಿಂದಿನ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್ ಇದೂವರೆಗೂ ದರ್ಶನ್ ಕೈಗೆ ಸಿಕ್ಕಿರಲಿಲ್ಲ.
ದರ್ಶನ್ ಬಗ್ಗೆ ಕೋಡಿ ಮಠದ ಶ್ರೀ ಹೇಳಿದ ಭವಿಷ್ಯ ಏನು?
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕೋಪದ ಕೈಗೆ ಬುದ್ದಿ ಕೊಟ್ಟರೇ ಈ ರೀತಿಯ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇನ್ನೂ ಉಮಾಪತಿ ಕೂಡ ಕೋಡಿ ಮಠಕ್ಕೆ ಹೋಗಾದ ಕೋಪ ಕಡಿಮೆ ಮಾಡಿಕೊಳ್ಳಬೇಕು. ತಂದೆ, ತಾಯಿ ಮಾತು ಕೇಳಬೇಕು ಅಂತ ಅಂದಿದ್ದರು. ಅದರಂತೆ ನಡೆದುಕೊಂಡ ಕಾರಣ, ಈಗ ಒಳ್ಳೆಯ ಸ್ಥಾನದಲ್ಲಿದ್ದೇನೆ ಅಂತ ಹೇಳಿದ್ದರು ಎಂಬುದಾಗಿ ನೆನಪು ಮಾಡಿಕೊಂಡರು. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದರು.
8 ದಿನಗಳ ಬಳಿಕ ಠಾಣೆಗೆ ಬಂದ ದರ್ಶನ್ ಪತ್ನಿ!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಪತ್ನಿ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೋರಾಟ ನಡೆಸುತ್ತಿದ್ದರು, ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು ಎನ್ನಲಾಗುತ್ತಿದೆ.
ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು ಎನ್ನಲಾಗುತ್ತಿದೆ.