ಅನುಶ್ರೀ ಮದುವೆ ಆಯ್ತು.. ಈಗ ಚಿಕ್ಕಣ್ಣ ಮದುವೆ ಫಿಕ್ಸ್!
– ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ
– ಚಿಕ್ಕಣ್ಣ ಕೊನೆಗೆ ಗೃಹಸ್ಥರಾಗಲು ಸಜ್ಜು
NAMMUR EXPRESS NEWS
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸದ್ದಿಲ್ಲದೇ ಚಿಕ್ಕು ಮದುವೆಯನ್ನು ಗುರುಹಿರಿಯರು ನಿಶ್ಚಯಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ.
ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದೆ. ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ. ಯುವತಿಗೆ ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದೆ. ಶೀಘ್ರದಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾದಲ್ಲಿ ಚಿಕ್ಕಣ್ಣ ಮದುವೆ ಬಗ್ಗೆ ಗುಲ್ಲಾಗಿತ್ತು. ಬಳಿಕ ಅದೆಲ್ಲಾ ಸುಳ್ಳು ಎಂದು ಗೊತ್ತಾಗಿತ್ತು. ಆದರೆ ಇದೀಗ ಮದುವೆ ವಿಚಾರ ಅಧಿಕೃತವಾಗಿದೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಚಿಕ್ಕಣ್ಣ ನಟಿಸಿದ್ದಾರೆ. ಬಹುತೇಕ ಹಾಸ್ಯ ಪಾತ್ರಗಳಲ್ಲೇ ಅವರು ಪ್ರೇಕ್ಷಕರಿಗೆ ಚಿರಪರಿಚಿತ. ಕಳೆದ ವರ್ಷ ‘ಉಪಾಧ್ಯಕ್ಷ’ ಚಿತ್ರದ ಮೂಲಕ ಹೀರೊ ಆಗಿ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರು.
ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚಿಕ್ಕಣ್ಣ ಟಾಕ್ ಶೋಗಳಲ್ಲಿ ಮದುವೆ ವಿಷಯ ಮಾತಾಡಿದಾಗೆಲ್ಲ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದರು. ಈಗ ಕೊನೆಗೆ ಗೃಹಸ್ಥರಾಗಲು ಸಜ್ಜಾಗಿದ್ದಾರೆ.







