Categories
ಸಿನಿಮಾ

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್!

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್!

– ಬ್ಯಾಚುಲ‌ರ್ ಪಾರ್ಟಿ’ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ಎಡವಟ್ಟು
– ಕಾಪಿರೈಟ್ ಉಲ್ಲಂಘನೆ ಆರೋಪದಡಿ ದೂರು ದಾಖಲು

NAMMUR EXPRESS NEWS

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ನವೀನ್ ಕುಮಾ‌ರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಿದ್ದು ಈಗಾಗಲೇ ಪೊಲೀಸರು ದೂರವಾಣಿ ಕರೆ ಮಾಡಿ ರಕ್ಷಿತ್ ಶೆಟ್ಟಿ ಬಳಿ ಮಾತನಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ. ಈ ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್ಲ್ಲಿ ಬ್ಯಾಚುಲ‌ರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರವ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.