Categories
ಬೆಂಗಳೂರು ಸಿನಿಮಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್!

– ಕೊಲೆ ಪ್ರಕರಣದಲ್ಲಿ ಬಂಧನ: ಏನಿದು ಘಟನೆ?
– ದರ್ಶನ್ ಗೆಳತಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕೊಲೆಯಾದ ವ್ಯಕ್ತಿ!

NAMMUR EXPRESS NEWS
ಮೈಸೂರು: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಖ್ಯಾತ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್ ನಿಂದ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ದರ್ಶನ್ ಗೆಳತಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕೊಲೆಯಾದ ವ್ಯಕ್ತಿ!

ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆಗೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ.
ದರ್ಶನ್ ಅವರ ಆಪ್ತ ಗೆಳತಿಯಾಗಿರುವ ಹಾಗೂ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ವಿವಾದಕ್ಕೆ ಗುರಿಯಾದ ಪವಿತ್ರಾ ಗೌಡ ಅವರಿಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಹಾಗೂ ಆನ್ಸೆನ್ ಕಿರುಕುಳ ನೀಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.