Categories
ಬೆಂಗಳೂರು ರಾಜ್ಯ ಸಿನಿಮಾ

ಸಿನಿಮಾ ರಂಗದ ತಾಯಿ ಇನ್ನಿಲ್ಲ!

ಸಿನಿಮಾ ರಂಗದ ತಾಯಿ ಇನ್ನಿಲ್ಲ!
– ಖ್ಯಾತ ನಟಿ ಲೀಲಾವತಿ ಅನಾರೋಗ್ಯದಿಂದ ನಿಧನ
– 50 ವರ್ಷದ ಸಿನಿಮಾ ಸೇವೆ: ಸಿನಿಮಾ ರಂಗದ ಕಂಬನಿ!

NAMMUR EXPRESS NEWS
ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಖ್ಯಾತ ನಟಿಯಾಗಿ, ಹಿರಿಯ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಸೇವೆ ನೀಡಿದ್ದಾರೆ. 87 ವರ್ಷದ ಲೀಲಾವತಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್‌ಕುಮಾರ್, ವಿಷ್ಣುವರ್ಧನ್ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ ಅಭಿಮಾನಿಗಳು ಸಿನಿಮಾ, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ.

ಸಾಮಾಜಿಕ ಕಾಳಜಿಯ ವ್ಯಕ್ತಿತ್ವ

ಲೀಲಾವತಿ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಸಿನಿಮಾ ಕಲಾವಿದರ ಬಗ್ಗೆ ಕಾಳಜಿ ಹೊಂದಿದ್ದರು. ಅನೇಕ ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಿದ್ದರು. ಪ್ರಾಣಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಅದೇ ಕಾರಣಕ್ಕಾಗಿ ಅವರು ಸ್ವಂತ ಹಣದಲ್ಲಿ ಸೋಲದೇವನಹಳ್ಳಿ ಬಳಿ ಪಶು ಆಸ್ಪತ್ರೆ ನಿರ್ಮಿಸಿದ್ದರು. ಆ ಆಸ್ಪತ್ರೆ ಉದ್ಘಾಟನೆ ಆದ ಕೆಲವೇ ದಿನಗಳ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.