Categories
ಕರಾವಳಿ ಮಂಗಳೂರು ಸಿನಿಮಾ

ಕೊರಮ್ಮ ತುಳು ಸಿನಿಮಾ ಸ್ವಾಗತಕ್ಕೆ ಸಜ್ಜು!

ಕೊರಮ್ಮ ತುಳು ಸಿನಿಮಾ ಸ್ವಾಗತಕ್ಕೆ ಸಜ್ಜು!
– ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.11ಕ್ಕೆ ಬಿಡುಗಡೆ
– ಶಿವಧ್ವಜ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷೆಯ ತುಳು ಸಿನಿಮಾ

NAMMUR EXPRESS NEWS
ಮಂಗಳೂರು: ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸುವ ಕಥೆ ಹೆಣೆದು ಸುಂದರವಾಗಿ ಮೂಡಿಬಂದಿರುವ ತುಳು ಸಿನೆಮಾ ‘ಕೊರಮ್ಮ’, ಇದೇ ಆಗಸ್ಟ್ 11 ರ ಶುಕ್ರವಾರದಂದು ಬಿಡುಗಡೆಗೊಳ್ಳಲಿದೆ. ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಕಲ್ಪನೆಯಲ್ಲಿ ಬಂದ ಸಿನಿಮಾ ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ ಮುಂತಾದ ಕಡೆಗಳಲ್ಲಿ ಬಿಡುಗಡೆಯಾಗಲಿದೆ. ಇನ್ನು ಹಲವು ಚಿತ್ರಮಂದಿರಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ. ಸಫೈರ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ಅಡ್ಯಾರ್ ಮಾಧವ ನಾಯ್ಕ್ ಅರ್ಪಿಸಿದ್ದಾರೆ.

ಅಡ್ಯಾರ್ ಮಾಧವ ನಾಯ್ಕ್, ಈಶ್ಚರಿದಾಸ್ ಶೆಟ್ಟಿ ಮತ್ತು ರಾಜೇಶ್ವರ ರೈ ನಿರ್ಮಾಪಕರಾಗಿದ್ದು, ಸಂಗೀತ ಶಿನೋಯ್ ಎ. ಜೋಸೆಫ್, ಛಾಯಾಗ್ರಹಣ ಸುರೇಶ್‌ ಬೈರಸಂದ್ರ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಶ್ರೀನಿಧಿ ಭಟ್, ಅನುವಾದ ಮತ್ತು ಸಾಹಿತ್ಯ ಕೆ. ಮಹೇಂದ್ರನಾಥ್ ಸಾಲೆತ್ತೂರು, ಕಲೆ ಸಂತೋಷ ಪೂಜಾರಿ ವೇಣೂರು, ಸಹ ನಿರ್ದೇಶನ ಹರ್ಷೀವ ಭಗೀರ, ಪ್ರಸಾಧನ ಕುಮಾರ್ ನೋಣವಿನಕೆರೆ ಮಾಡಿದ್ದಾರೆ. ದೀಪಕ್ ಸಿನಿ ಗ್ಯಾಲಕ್ಸಿ ಹಂಚಿಕೆ ಮಾಡುತ್ತಿದ್ದಾರೆ.

ಸಿನಿಮಾ ತಾರಾಗಣದಲ್ಲಿ ಯುವ ನಟ ನಟಿಯರು!

ಸಿನಿಮಾದ ತಾರಾಗಣದಲ್ಲಿ ಗುರುಹೆಗ್ಡೆ, ರೂಪಶ್ರೀ ವರ್ಕಾಡಿ, ಮೋಹನ್‌ ಶೇಣಿ, ಬಿಂದುರಕ್ಷಿದಿ, ಜಿನಪ್ರಸಾದ್‌, ದಿವ್ಯಶ್ರೀ, ನಾಯಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ನಮಿತಾ ಕೂಳೂರು, ಸುಮನ ಮಂಗಳೂರು, ಹರೀಶ್‌ ಜೋಡುರಸ್ತೆ ಮತ್ತಿರರಿದ್ದಾರೆ. ತುಳು ನಾಡ ಕ್ರಿಯಾಶೀಲ ಕಲಾವಿದರ ತಂಡ ಸಿನಿಮಾದಲ್ಲಿದೆ.

ತುಳುನಾಡ ಬದುಕಿನ ಚಿತ್ರಣದ ಪ್ರತಿಬಿಂಬ

ಕೊರಮ್ಮ ಚಿತ್ರದ ಹಾಡಿನ ದೃಶ್ಯದಲ್ಲಿ ತುಳುನಾಡಿನ ಪೂರ್ವಜರ ಬದುಕು ಮಾರ್ಮಿಕವಾಗಿ ಪ್ರತಿಬಿಂಬಿತವಾಗಿದೆ. ತುಳುವರ ಹಿರಿಯರ ಕಾಲದ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು ಮಾಡಿರುವ ಈ ಸಿನೆಮಾದ ಕಥೆ-ಚಿತ್ರಕಥೆ-ನಿರ್ದೇಶನ ಮಾಡಿದ್ದಾರೆ ಗಗ್ಗರ ಸಿನಿಮಾ ಮೂಲಕ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ ನಿರ್ದೇಶಕ ಶಿವಧ್ವಜ್ ಶೆಟ್ಟಿ. ತುಳು ಚಿತ್ರರಂಗಕ್ಕೆ ಬದಲಾವಣೆ ಕೊಡಬಲ್ಲ ಮೌಲ್ಯಯುತವಾದ ಕಥಾವಸ್ತುವನ್ನು ‘ಕೊರಮ್ಮ’ ಚಲನಚಿತ್ರ ಹೊಂದಿದೆ ಎನ್ನುವುದು ಚಿತ್ರ ತಂಡದ ಮಾತು.

ಕಾರ್ಕಳದ ಬೈಲೂರಲ್ಲಿ ಶೂಟಿಂಗ್!

ಕಾರ್ಕಳದ ಬೈಲೂರಿನ ಸುಂದರ ತಾಣದಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣವಾಗಿರುವ ಈ ‘ಕೊರಮ್ಮ’ ತುಳುಚಿತ್ರ ಈಗ ತುಳು ನಾಡಲ್ಲಿ ಭಾರೀ ಭರವಸೆ ಮೂಡಿಸಿದೆ.

ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ

[embedyt] https://www.youtube.com/watch?v=rTGqP21dgrM%5B/embedyt%5D

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.