Categories
ಬೆಂಗಳೂರು ರಾಜ್ಯ ಸಿನಿಮಾ

ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು
– ಕುಟುಂಬಸ್ಥರ ಆಕ್ರೋಶ!
– ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧಾರ

NAMMUR EXPRESS NEWS
ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್​ ದೇವರಾಜ್​ ಅವರು ಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೊವನ್ನು ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ. ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.

ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.