Categories
ಸಿನಿಮಾ

ಪ್ರವೀಣ್ ತೇಜ್ ಮಾಸ್ ಲುಕ್‌ನಲ್ಲಿ ಎಂಟ್ರಿ!

ಪ್ರವೀಣ್ ತೇಜ್ ಮಾಸ್ ಲುಕ್‌ನಲ್ಲಿ ಎಂಟ್ರಿ!
– ‘ಜಿಗರ್ ‘ ಸಿನಿಮಾದ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ
– ಮಲೆನಾಡ ಹುಡುಗನ ಸಿನಿಮಾ ಜರ್ನಿ ಸೂಪರ್

NAMMUR EXPRESS NEWS
ಸ್ಯಾಂಡಲ್‌ ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಜಿಗರ್ ಮೂಲಕ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಜಿಗರ್ ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ. ಜಿಗರ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ ಆಗಿದ್ದರೂ ಸದ್ಯ ರೋಮ್ಯಾಂಟಿಕ್ ಹಾಡಿನ ಮೂಲಕ ಮೋಡಿ ಮಾಡುತ್ತಿದ್ದಾರೆ ಪ್ರವೀಣ್. ಅಂದಹಾಗೆ ಸದ್ಯ ಬಿಡುಗಡೆಯಾಗಿರುವ ಈ ಹಾಡು ಗಾನ ಪ್ರಿಯರ ಹಾಟ್ ಫೇವರಿಟ್ ಸಿಂಗರ್ ಸಂಚಿತ್ ಹೆಗ್ಡೆ ಕಂಠದಲ್ಲಿ ಮೂಡಿಬಂದಿದೆ.

ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಿಟ್. ಜಿಗರ್ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ ಸಂಚಿತ್ ಧ್ವನಿಯಲ್ಲಿ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ. ಸುಮ್ಮನೆ…..’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರುತ್ವಿಕ್ ಮುರಳಿಧರ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯವಿದೆ. ಈಗಾಗಲೇ ಚಮಕ್, ವೆನಿಲ್ಲ, ಸಖತ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ಜಿಗರ್ ಸಿನಿಮಾದ ಹಾಡನ್ನೂ ಬರೆದಿದ್ದಾರೆ. ಈ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಪೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

ಅಂದಹಾಗೆ ಪ್ರವೀಣ್ ತೇಜ್ ಅವರನ್ನು ಆಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್‌ ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ ಜಿಗರ್ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಗಿದ್ದು ಪೂಜಾ ವಸಂತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ ಕ್ಯ ಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.

ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರುನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ ಜಿಗರ್ ಮೂಲಕ ಎಂಟ್ರಿಕೊಡುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

[embedyt] https://www.youtube.com/watch?v=m8lDD0TjRUY%5B/embedyt%5D

ಇದನ್ನೂ ಓದಿ : ಬೈಕ್ ಇಂಜಿನ್ ಒಳಗೆ ಇತ್ತು ಹಾವು!

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.