Categories
ಸಿನಿಮಾ

ಪಂಜರದ “ಗಿಣಿ”ಗೆ ಅಂತೂ ಸಿಕ್ತು ಬೇಲ್


-140 ದಿನಗಳ ನಂತರ ಬಿಡುಗಡೆ ಭಾಗ್ಯ
-ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 140 ದಿನಗಳಿಂದ ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಸೇರಿದಂತೆ ಹಲವು ಪ್ರಮುಖ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿತ್ತು. ಆದರೆ ರಾಗಿಣಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು.
ಈ ಹಿನ್ನೆಲೆಯಲ್ಲಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ರಾಗಿಣಿಗೆ ಜಾಮೀನು ಮಂಜೂರು ಮಾಡಿದ್ದು ಪಂಜರದ “ಗಿಣಿ”ಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.