Categories
ಸಿನಿಮಾ

ಪ್ಯಾನ್ ಇಂಡಿಯಾಕ್ಕೆ ಉಪ್ಪಿ ಬಾಯ್!

ಪ್ಯಾನ್ ಇಂಡಿಯಾಕ್ಕೆ ಉಪ್ಪಿ ಬಾಯ್!
* ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್
* ಕೂಲಿ ಚಿತ್ರದಲ್ಲಿ ಕಲೀಷ ಪಾತ್ರದಲ್ಲಿ ಉಪೇಂದ್ರ

NAMMUR EXPRESS NEWS
ಕನ್ನಡದ ಅನೇಕ ನಟರು ಈಗ ರಾಷ್ಟ್ರ ಮಟ್ಟದ ನಟರಾಗಿ ಗುರುತಿಸಿಕೊಳ್ಳುತ್ತಿದ್ದಾರೆ.
ಕೆಜಿಎಫ್ ಯಶ್, ಕಾಂತಾರ ರಿಷಬ್ ಶೆಟ್ಟಿ, ಚಾರ್ಲಿ ರಕ್ಷಿತ್ ಶೆಟ್ಟಿ, ವಿಕ್ರಾಂತ್ ರೋಣ ಸಿನಿಮಾದ ಮೂಲಕ ಸುದೀಪ್ ಪ್ಯಾನ್ ಇಂಡಿಯಾ ನಟರಾಗಿದ್ದಾರೆ. ಇದೀಗ ಉಪೇಂದ್ರ ಸರದಿ.
ಸೂಪರ್‌ ಸ್ಟಾರ್‌ ತಲೈವಾ ರಜಿನಿಕಾಂತ್‌ ಜತೆಗೆ ರಿಯಲ್ ಸ್ಟಾರ್ ಉಪೇಂದ್ರ ಮಿಂಚಲಿದ್ದಾರೆ. ಕೂಲಿ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.
ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದ್ದು,
ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ತೆರೆ ಕಾಣಲಿದೆ . ಜೈಲ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿ ಸಿನಿಮಾವನ್ನು ನಿರ್ಮಿಸಲಿದ್ದಾರೆ.
ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.
ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.
ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.