ದರ್ಶನ್ ನೆರವಿಗೆ ನಿಲ್ಲಲ್ಲ ಸರ್ಕಾರ!
– ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಅಲರ್ಟ್
– ದರ್ಶನ್ ಮೇಲೆ ರೌಡಿ ಶೀಟರ್ ಕೇಸ್?
NAMMUR EXPRESS NEWS
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್‌ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್ ಪುತ್ರನ ಸಿನಿಮಾ ಪ್ರಮೋಷನ್‌ಗೆ ಡಿಬಾಸ್ ಸಹಾಯ ಮಾಡಿದ್ದರು. ರೇಣುಕಾಸ್ವಾಮಿ ಕೇಸ್ ನಲ್ಲಿ ಇನ್ವಾಲ್ ಆಗಬೇಡ. ದರ್ಶನ್ ವಿರುದ್ಧ ಸೀರಿಯಸ್ ಅಲಿಗೇಷನ್ ಇದೆ ಎಂದು ಸಿದ್ದರಾಮಯ್ಯ ಅವರು ಜಮೀರ್‌ಗೆ ತಿಳಿಸಿದ್ದಾರೆ. ಒಂದು ವೇಳೆ ಈ ಕೇಸ್‌ನಲ್ಲಿ ನಿನ್ನ ಹೆಸರು ಬಂದರೆ, ಬಳ್ಳಾರಿ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ನಾಗೇಂದ್ರನಿಗೆ ಬಂದ ಗತಿ ನಿನಗೂ ಬರುತ್ತದೆ. ದರ್ಶನ್ ಹಾಗೂ ನಿನ್ನ ಸ್ನೇಹ ನನಗೂ ಗೊತ್ತಿದೆ. ಆದರೆ, ಈ ಕೇಸ್ ನಿಂದ ದೂರ ಇರು ಎಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆಗಿ ಜಮೀರ್‌ಗೆ ಹೇಳಿದ್ದಾರೆ.
ನ್ಯಾಯಾಂಗ ಬಂಧನಕ್ಕೆ ದರ್ಶನ್!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!?
ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.
ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮೇಲೆ ರೌಡಿ ಶೀಟ್ ಓಪನ್ ಆಗುವ ಸಾಧ್ಯತೆ ಇದೆ. ಈ ಹಿಂದೆ ಮೈಸೂರಿನ ಹೊಟೇಲ್ ಒಂದರಲ್ಲಿ ಸಪ್ಲೆಯರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದ. ಬೆಂಗಳೂರಿನ ಪಬ್ ಒಂದರಲ್ಲಿ ಅಭಿಮಾನಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದರು. ಹೀಗೆ ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗ್ತಿರೋ ಹಿನ್ನೆಲೆ ರೌಡಿ ಶೀಟರ್ ಓಪನ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ದರ್ಶನ್ ವಿರುದ್ಧ ಹಳೆ ಕೇಸ್ ಗಳ ಪರಿಶೀಲನೆ ನಡೆಸಿ ರೌಡಿ ಪಟ್ಟಿಯಲ್ಲಿ ಸೇರಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.