Categories
ಸಿನಿಮಾ

4 ಕೋಟಿಗೂ ಹೆಚ್ಚು ವೀಕ್ಷಣೆಯನ್ನು ಪಡೆದ ‘ಕಲ್ಕಿ’ ಚಿತ್ರದ ಟ್ರೈಲರ್

4 ಕೋಟಿಗೂ ಹೆಚ್ಚು ವೀಕ್ಷಣೆಯನ್ನು ಪಡೆದ ‘ಕಲ್ಕಿ’ ಚಿತ್ರದ ಟ್ರೈಲರ್

ನಾಗ್ ಅಶ್ವಿನ್ ಅವರು ನಿರ್ದೇಶಿಸಿದ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ತನ್ನ ಮೊದಲ ದಿನದಲ್ಲಿ ಒಟ್ಟು 40 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ಭರ್ಜರಿ ಯಶಸ್ಸು ಕಂಡಿದೆ. ಈ ಚಿತ್ರದಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಅವರ ತಾರಾಗಣವಿದೆ.

ಈ ಚಿತ್ರದ ಟ್ರೈಲರ್ ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಈ ಚಿತ್ರ 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದು, ಜೂನ್ 27 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಈ ಚಿತ್ರದ ಟ್ರೈಲರ್‌ನ ಭರ್ಜರಿ ಯಶಸ್ಸು ಚಿತ್ರದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ‘ಕಲ್ಕಿ 2898 AD’ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸನ್ನು ಕಾಣಬಹುದೇ ಎಂದು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.