ಸಂಭಾವನೆಯಲ್ಲಿ ದಾಖಲೆ ಬರೆದ ಯಶ್: 200 ಕೋಟಿ ಸಂಬಳ!
– ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲು
– ಭಾರತದ ದುಬಾರಿ ಆ್ಯಂಟಿ ಹೀರೋ ಹಾಗೂ ವಿಲನ್
NAMMUR EXPRESS NEWS
ಇತ್ತೀಚೆಗಷ್ಟೆ ಬಿಡುಗಡೆ ಆದ ‘ಪುಷ್ಪ 2’ ಸಿನಿಮಾಕ್ಕೆ ಅಲ್ಲು ಅರ್ಜುನ್ 300 ಕೋಟಿಗೂ ಹೆಚ್ಚು ಹಣ ಸಂಭಾವನೆಯಾಗಿ ಪಡೆದಿದ್ದು ಸುದ್ದಿಯಾಗಿತ್ತು. ನಟ ಯಶ್ ಸಹ ಸಂಭಾವನೆ ಪಡೆವ ವಿಷಯದಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಭಾರತದ ಅತಿ ದೊಡ್ಡ ಸಿನಿಮಾ ಪ್ರಾಜೆಕ್ಟ್ ಆಗಿರುವ ರಾಮಾಯಣ ಕತೆ ಆಧರಿತ ಸಿನಿಮಾದಲ್ಲಿ ಯಶ್ ನಟಿಸುತ್ತಿದ್ದಾರೆ. ಯಶ್, ರಾವಣನ ಪಾತ್ರದಲ್ಲಿ ನಟಿಸುತ್ತಿದ್ದು, ರಾವಣನ ಪಾತ್ರದಲ್ಲಿ ನಟಿಸಲು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆಯನ್ನು ಯಶ್ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ರಾವಣನ ಪಾತ್ರ ಆ್ಯಂಟಿ ಹೀರೋ ಪಾತ್ರವಾಗಿದ್ದು, ಆ್ಯಂಟಿ ಹೀರೋ ಪಾತ್ರ ನಿರ್ವಹಿಸಲು ನಟನೊಬ್ಬ ಇಷ್ಟು ದೊಡ್ಡ ಸಂಭಾವನೆ ಪಡೆದಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಸಿನಿಮಾದಲ್ಲಿ ರಣ್ಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಯಿ ಪಲ್ಲವಿ ಸೀತಾ ದೇವಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದ್ದು, ಹಾಲಿವುಡ್ನ ‘ಅವತಾರ್’ ಸಿನಿಮಾಕ್ಕೆ ಬಳಸಲಾಗಿರುವ ತಂತ್ರಜ್ಞಾನ ಬಳಸಿ ಈ ಸಿನಿಮಾ ನಿರ್ಮಿಸಲಾಗುತ್ತಿದೆ. ಹಲವು ಹಾಲಿವುಡ್ ಕಲಾವಿದರು ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಆಸ್ಕರ್ ವಿಜೇತ ಹಾನ್ಸ್ ಜಿಮ್ಮರ್ ಈ ಸಿನಿಮಾಕ್ಕೆ ಸಂಗೀತ ನೀಡಲಿದ್ದಾರೆ. ಅಂದಹಾಗೆ ಈ ಸಿನಿಮಾಕ್ಕೆ ಯಶ್ ಸಹ ನಿರ್ಮಾಪಕ ಸಹ ಆಗಿದ್ದಾರೆ. ಸಿನಿಮಾ ಅನ್ನು ನಿತೀಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ.