14ರ ಹುಡುಗ ವಿಶ್ವ ಕ್ರಿಕೆಟ್ ಹೀರೋ!
– ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ
– ಶತಕ ಹೊಡೆದು ದೇಶದಲ್ಲಿ ಇತಿಹಾಸ ನಿರ್ಮಿಸಿದ 9ನೇ ಕ್ಲಾಸ್ ಹುಡುಗ
NAMMUR EXPRESS NEWS
ಜೈಪುರ: ತಾನು ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸುವ ಮೂಲಕ ರಾಜಸ್ಥಾನ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ನಲ್ಲಿ ದಾಖಲೆ ಬರೆದಿದ್ದು ಇದೀಗ ಶತಕ ಹೊಡೆಯುವ ಮೂಲಕ ವಿಶ್ವ ಕ್ರಿಕೆಟ್ ಹೀರೋ ಆಗಿ ಮೆರೆಯುತ್ತಿದ್ದಾರೆ.
14 ವರ್ಷ, 23 ದಿನಗಳ ವಯಸ್ಸಿನಲ್ಲಿ ಐಪಿಎಲ್ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರವಾಗಿದ್ದಾರೆ. ಇದರ ಜೊತೆ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಕಿರಿಯ ಆಟಗಾರ ಎಂಬ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ರಾಜಸ್ಥಾನ ರಾಯಲ್ಸ್ ತಂಡದ ಯುವ ಬ್ಯಾಟರ್ 14 ವರ್ಷದ ವೈಭವ್ ಸೂರ್ಯವಂಶಿ IPLನಲ್ಲಿ ಅಬ್ಬರಿಸಿದ್ದಾನೆ. ‘ಈ ಬಾಲಕ ಐಪಿಎಲ್ನಲ್ಲಿ ಏನು ಮಾಡಬಲ್ಲʼ ಎಂಬ ಪ್ರಶ್ನಿಸಿದ್ದವರಿಗೆ, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಉತ್ತರಿಸಿದ್ದಾನೆ. ಐಪಿಎಲ್ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿ ಮಿಂಚಿದ ವೈಭವ್, ಇದೀಗ 101 ರನ್ ಗಳಿಸಿ ಅತಿ ಕಿರಿಯ ವಯಸ್ಸಿನಲ್ಲೇ ಶತಕ ಸಿಡಿಸಿದ ದಾಖಲೆ ಬರೆದಿದ್ದಾನೆ. ವೈಭವ್ ಸೂರ್ಯವಂಶಿಯ ಸಾಧನೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಬಾಲ್ಯದ ಕೋಚ್ ಮನೀಶ್ ಓಜಾ ಅವರ ಮಾರ್ಗದರ್ಶನ ಮತ್ತು ರಾಹುಲ್ ದ್ರಾವಿಡ್ ಅವರ ಬೆಂಬಲ ವೈಭವ್ ಯಶಸ್ಸಿಗೆ ಕಾರಣವಾಗಿದೆ.
14 ವರ್ಷ 32 ದಿನಗಳಲ್ಲಿ ಐಪಿಎಲ್ ಆಡಿದ್ದಲ್ಲದೆ, ಶತಕ ಸಿಡಿಸಿ ಮಿಂಚಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧದ ಶತಕ ಸಾಧನೆಯ ಇನ್ನಿಂಗ್ಸ್ನಲ್ಲಿ 11 ಸಿಕ್ಸರ್ ಮತ್ತು 7 ಬೌಂಡರಿಗಳಿದ್ದವು. ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಶೀದ್ ಖಾನ್ ಮತ್ತು ಕರೀಂ ಜನತ್ ಅವರಂತಹ ಅಂತಾರಾಷ್ಟ್ರೀಯ ಮಟ್ಟದ ಬೌಲರ್ಗಳನ್ನು ದಂಡಿಸುವ ಮೂಲಕ ವೈಭವ್ ಎಲ್ಲರನ್ನೂ ಚಕಿತಗೊಳಿಸಿದರು.
– 5ನೇ ವಯಸ್ಸಿನಲ್ಲೇ ಕ್ರಿಕೆಟಿಗೆ ಕಾಲಿಟ್ಟಿದ್ದ ವೈಭವ್!
5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.
2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದರು.
ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಇದೀಗ ವಿಶ್ವದ ಗಮನ ಸೆಳೆದಿದ್ದಾರೆ.








