ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ರಾಹುಲ್ ಔಟ್!
– ರೋಹಿತ್ ಶರ್ಮಾ ನಾಯಕ, ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯ
– ಯಾರಿಗೆ ಅವಕಾಶ? ಯಾರಿಗೆ ಅವಕಾಶ ಸಿಗಲಿಲ್ಲ?
NAMMUR EXPRESS NEWS
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಭಾರತ ತಂಡವನ್ನು ಮಂಗಳವಾರ ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಕನ್ನಡಿಗ ಕೆಎಲ್ ರಾಹುಲ್ ಅವರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
2024ರ ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್ , ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್