ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
* ಐಸಿಸಿ ಹಾಲ್ ಆಫ್ಗೆ ಎಂ.ಎಸ್ ಧೋನಿ
* ಕಾಲ್ತುಳಿತ ಘಟನೆಗೆ ಸರ್ಕಾರವೇ ಕಾರಣ – ಆರ್ಸಿಬಿಯಿಂದ ಚಾರ್ಜ್ಶೀಟ್
NAMMMUR EXPRESS SPORTS NEWS
ನವದೆಹಲಿ: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ವಿಶ್ವದ 7 ಆಟಗಾರರಿಗೆ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹಾಲ್ ಆಫ್ ಫೇಮ್ ಗೌರವ ನೀಡಿದೆ. ಧೋನಿ ಅವರ ನಾಯಕತ್ವದ ಗುಣಗಳು ಹಾಗೂ ಕ್ರಿಕೆಟ್ಗೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಅವರನ್ನು ಹಾಲ್ ಆಫ್ ಫೇಮ್ ಪಟ್ಟಿಗೆ ಸೇರಿಸಲಾಗಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಇದರೊಂದಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾದ 11ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ.
* ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಧೋನಿ ಸಾಧನೆ
ಮಹೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಅದರಲ್ಲೂ ಐಸಿಸಿ ಟೂರ್ನಿಯ ಮೂರು ಪ್ರಶಸ್ತಿಗಳನ್ನು ಪಡೆದ ಏಕೈಕ ಕ್ಯಾಪ್ಟನ್ ಧೋನಿ. 2007 ರಲ್ಲಿ ಧೋನಿ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಅಲ್ಲದೆ 2011 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಧೋನಿ ಪ್ರಮುಖ ಪಾತ್ರವಹಿಸಿದ್ದರು.
ಅಲ್ಲದೆ ಟೀಮ್ ಇಂಡಿಯಾ ಪರ 538 ಪಂದ್ಯಗಳನ್ನಾಡಿರುವ ಧೋನಿ ಒಟ್ಟು 17266 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 26ನೇ ಸ್ಥಾನ ಅಲಂಕರಿಸಿದ್ದಾರೆ. ಈ ಎಲ್ಲಾ ಸಾಧನೆಗಾಗಿ ಮಹೇಂದ್ರ ಸಿಂಗ್ ಧೋನಿಗೆ ಹಾಲ್ ಆಫ್ ಫೇಮ್ ಗೌರವ ನೀಡಲಾಗಿದೆ.
* ಕಾಲ್ತುಳಿತ ಘಟನೆಗೆ ಸರ್ಕಾರವೇ ಕಾರಣ – ಆರ್ಸಿಬಿಯಿಂದ ಚಾರ್ಜ್ಶೀಟ್
ಬೆಂಗಳೂರಿನ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್ ಗೆ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿವೆ. ಅದರಲ್ಲೂ ಡಿಎನ್ಎ ಎಂಟರ್ಟೈನ್ಮೆಂಟ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ನದ್ದು. ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು ಎಂದು ರಿಟ್ ಅರ್ಜಿಯಲ್ಲಿ ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದೆ.
ಭಾರತ ಟಿ20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ವಿಕ್ಟರಿ ಪರೇಡ್ ನಡೆಸಲಾಗಿತ್ತು.DNA ಆಯೋಜಿಸಿದ್ದ ಪರೇಡ್ ನಲ್ಲಿ 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೆಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32,000 ಇದ್ರೂ ಸಮಸ್ಯೆ ಆಗಿರಲಿಲ್ಲ ಎಂದು ಡಿಎನ್ಎ ಎಂಟರ್ಟೈನ್ಮೆಂಟ್ ಎಂದು ಹೈಕೋರ್ಟ್ ಗೆ ತಿಳಿಸಿದೆ.
ಆರ್ಸಿಬಿ ವಿಕ್ಟರಿ ಪರೇಡ್ ನಡೆಸಲು ಅನುಮತಿಗಾಗಿ ಜೂನ್ 3ರಂದು ಪತ್ರ ಬರೆಯಲಾಗಿತ್ತು. ತೆರೆದ ಬಸ್ ನಲ್ಲಿ ಪರೇಡ್ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮಕ್ಕೆ ನಿರ್ಧರಿಸಿತು.ಪೊಲೀಸರು ವಿಧಾನಸೌಧದ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಿದರು. ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ಇರಲಿಲ್ಲ. ಡಿಎನ್ಎ ಸಂಸ್ಥೆಯಿಂದಲೇ 584 ಖಾಸಗಿ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದು ಆರೋಪಿಸಿದೆ.
ಸಿಎಂ ಸೂಚನೆ ಮೇರೆಗೆ DNA ಸಂಸ್ಥೆಯ ಇಬ್ಬರು ಸಿಬ್ಬಂದಿ ಬಂಧಿಸಲಾಗಿದೆ. ಘಟನೆ ದಿನ ಪೊಲೀಸರಿಗೆ 2,450 ಆಹಾರ ಪೊಟ್ಟಣ ಸಿದ್ಧಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿ ಇದ್ದುದರಿಂದ ಜೂನ್ 4ರಂದು ಮಧ್ಯಾಹ್ನ 600 ಆಹಾರ ಪೊಟ್ಟಣ ಮಾತ್ರ ಸ್ವೀಕರಿಸಿದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಪೊಟ್ಟಣ ಸ್ವೀಕರಿಸಿದರು. ಮಧ್ಯಾಹ್ನ 3.30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಇತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ ಎಂದು ಡಿಎನ್ಎ ತನ್ನ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದೆ.
ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, KSCAನದ್ದು. ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿ ಕ್ಷಣಕ್ಷಣದ ಪ್ಲ್ಯಾನ್ ರೂಪಿಸಿದ್ದರು. ಸರ್ಕಾರ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಕಾಲ್ತುಳಿತವಾಗಿದೆ. ಲಕ್ಷಾಂತರ ಜನ ವಿಧಾನಸೌಧಕ್ಕೆ ಬಂದು, ಸ್ಟೇಡಿಯಂಗೂ ಬಂದಿದ್ದೇ ಈ ಘಟನೆ ಕಾರಣ ಎಂದು ತಿಳಿಸಿದೆ.








