ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
* ಭಾರತ ಹಾಗೂ ಇಂಗ್ಲೆಂಡ್ ಟೆಸ್ಟ್ನ ಹೆಸರು ರಿವೀಲ್
* ಇಂಗ್ಲೆಂಡ್ ಲಯನ್ಸ್ ವಿರುದ್ಧ ಟೆಸ್ಟ್,ರಾಹುಲ್ ಮೇಲೆ ಕಣ್ಣು
NAMMMUR EXPRESS SPORTS NEWS
ಇಂಗ್ಲೆಂಡ್ ಪ್ರವಾಸದಲ್ಲಿ ಈಗಾಗಲೇ ಭಾರತ ತನ್ನ ಅದೃಷ್ಟ ಪರೀಕ್ಷೆಯನ್ನು ಆರಂಭಿಸಿದೆ. ಈ ವೇಳೆ ಭಾರತ ಎ ತಂಡ ಇಂಗ್ಲೆಂಡ್ ಲಯನ್ಸ್ ತಂಡದ ವಿರುದ್ಧ 2 ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ. ಈ ಟೂರ್ನಿ ಮುಗಿದ ಬಳಿಕ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಗೆ ಭಾರತದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ನ ವೇಗಿ ಜೇಮ್ಸ್ ಆಂಡರ್ಸನ್ ಹೆಸರನ್ನು ಇಡಲಾಗಿದೆ. ಇವರಿಬ್ಬರ ಹೆಸರಿನಲ್ಲಿ ನಡೆಯುವ ಟ್ರೋಫಿಯನ್ನು ಜೂನ್ 20ರಂದು ರಿವೀಲ್ ಮಾಡಲಾಗುತ್ತದೆ.
ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ. ಇವರು ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ಆಟಗಾರ. ಸಚಿನ್ 1989 ರಿಂದ 2013ರ ವರೆಗೆ 200 ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್. ಇವರು ಇಂಗ್ಲೆಂಡ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್. ಇವರು ಟೆಸ್ಟ್ ಕ್ರಿಕೆಟ್ನಲ್ಲಿ 704 ವಿಕೆಟ್ ಪಡೆದ ಸಾಧಕ. ಇವರು ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಈಗ ಇವರು ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಆದರೆ ಇವರು ಇನ್ನು ಕೌಂಟಿ ಕ್ರಿಕೆಟ್ ಆಡುತ್ತಿರುವುದನ್ನು ಕಾಣಬಹುದಾಗಿದೆ.
* ಕ್ರಿಕೆಟ್ ದಿಗ್ಗಜರಿಗೆ ಗೌರವ
ಸಚಿನ್ ತೆಂಡೂಲ್ಕರ್ ಹಾಗೂ ಜೇಮ್ಸ್ ಆಂಡರ್ಸನ್ ಸತತ 14 ವರ್ಷ ಎದುರಾಳಿಗಳಾಗಿ ಆಡಿದ್ದಾರೆ. ಇನ್ನು ಟೆಸ್ಟ್ನಲ್ಲಿ ಯಾವೊಬ್ಬ ಬೌಲರ್ ತೆಂಡೂಲ್ಕರ್ ಅವರನ್ನು ಔಟ್ ಮಾಡಿದಷ್ಟು ಬಾರಿ ಜೇಮ್ಸ್ ಔಟ್ ಮಾಡಿದ್ದಾರೆ. ಈ ರೀತಿಯಾಗಿ ಮಾಜಿ ಆಟಗಾರರ ಹೆಸರನ್ನು ಇಟ್ಟು ಟ್ರೋಫಿಗೆ ಗೌರವಿಸು ಕಾರ್ಯ ಕಳೆದ ವರ್ಷದಿಂದ ಆರಂಭವಾಯಿತು. ಕಳೆದ ವರ್ಷ ಇಂಗ್ಲೆಂಡ್, ನ್ಯೂಜಿಲೆಂಡ್ ಪ್ರವಾಸ ಬೆಳೆಸಿದ್ದಾಗ ಕ್ರೋವ್-ಥಾರ್ಪ್ ಎಂಬ ಹೆಸರಿನಲ್ಲಿ ಟ್ರೋಫಿಯನ್ನು ಆಡಿಸಲಾಯಿತು. ನ್ಯೂಜಿಲೆಂಡ್ನ ಮಾಜಿ ಬ್ಯಾಟ್ಸ್ಮನ್ ಮಾರ್ಟಿನ್ ಕ್ರೋವ್ ಮತ್ತು ಇಂಗ್ಲೆಂಡ್ನ ಗ್ರಹಾಂ ಥೋರ್ಪ್ ಅವರಿಗೆ ಈ ಮೂಲಕ ಗೌರವ ಸೂಚಿಸಲಾಗಿತ್ತು. ಇಂಗ್ಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್ ಸರಣಿಯನ್ನು ಈ ಹಿಂದೆ ಪಟೌಡಿ ಟ್ರೋಫಿ ಎಂದು ಕರೆಯಲಾಗಿತ್ತು. ಕಳೆದ ವರ್ಷ ನಡೆದಿದ್ದ ಸರಣಿಯನ್ನು ಇಂಗ್ಲೆಂಡ್ ಗೆದ್ದು ಬೀಗಿತ್ತು. ಕಳೆದ ಬಾರಿ ಕೋವಿಡ್ ಸಮಯದಲ್ಲಿ ನಡೆದಿದ್ದ ಸರಣಿ ಡ್ರಾ ಆಗಿತ್ತು.
* ಇಂಗ್ಲೆಂಡ್ ಲಯನ್ಸ್ ವಿರುದ್ಧ ಟೆಸ್ಟ್, ರಾಹುಲ್ ಮೇಲೆ ಕಣ್ಣು
ನಾರ್ಥಾಂಪ್ಟನ್ ನಲ್ಲಿ ಭಾರತ “ಎ” ಹಾಗೂ ಇಂಗ್ಲೆಂಡ್ ಲಯನ್ಸ್ ವಿರುದ್ಧ ಕಾದಾಟ ನಡೆಯಲಿದೆ. ಈ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತದ ಅನುಭವಿ ಆಟಗಾರರು ಮೈದಾನ ಪ್ರವೇಶಿಸಲಿದ್ದಾರೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಹೀಗಾಗಿ ಈ ಟೆಸ್ಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದ ಬಳಿಕ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಆಡಲಿದೆ.ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಿದ್ದ ಕೆಎಲ್ ರಾಹುಲ್ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ. ಟೆಸ್ಟ್ ತಂಡಕ್ಕೂ ಮುನ್ನ ಅಭ್ಯಾಸ ನಡೆಸಲು ಕನ್ನಡಿಗ ರಾಹುಲ್ ಇಂಗ್ಲೆಂಡ್ ತಲುಪಿದ್ದಾರೆ. ಹೀಗಾಗಿ ಈ ಆಟಗಾರನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ಜೂನ್ 20 ರಿಂದ ಆರಂಭವಾಗಲಿದೆ. ಈ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ.








