ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
ಐಪಿಎಲ್ -2025
* ಪಂಜಾಬ್ ತವರಲ್ಲೇ ಸೇಡು ತೀರಿಸಿಕೊಂಡ ಆರ್ಸಿಬಿ
* ಮುಂಬೈ ಎದುರು ಮಂಡಿಯೂರಿದ ಚೈನ್ನೈ
NAMMMUR EXPRESS SPORTS NEWS
* ಪಂಜಾಬ್ ತವರಲ್ಲೇ ಸೇಡು ತೀರಿಸಿಕೊಂಡ ಆರ್ಸಿಬಿ
ಪಂಜಾಬ್: ಪಂಜಾಬ್ ಕಿಂಗ್ಸ್ ಮತ್ತು ಆರ್ಸಿಬಿ ತಂಡಗಳ ನಡುವೆ ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಆರ್ಸಿಬಿ ತಂಡವು ಸುಲಭ ಗೆಲುವು ಸಾಧಿಸಿ ಪಂಜಾಬ್ ವಿರುದ್ಧ ತವರಲ್ಲಿ ಸೋತಿದ್ದ ಸೇಡು ತೀರಿಸಿಕೊಂಡಿತು. ಯಶಸ್ವಿಯಾಯಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಪಂಜಾಬ್ಗೆ ಬ್ಯಾಟಿಂಗ್ಗೆ ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬೆಂಗಳೂರು ತಂಡ 18.5 ಓವರ್ಗಳಲ್ಲಿ ಮೂರು ವಿಕೆಟ್ಗಳನ್ನು ಕಳೆದುಕೊಂಡು ಗುರಿ ತಲುಪಿತು.ಆರ್ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ತಲಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಆರ್ಸಿಬಿಗೆ 7 ವಿಕೆಟ್ಗಳ ಜಯ ತಂದುಕೊಟ್ಟರು.
* ಮುಂಬೈ ಎದುರು ಮಂಡಿಯೂರಿದ ಚೈನ್ನೈ
ಮುಂಬೈ: ಪ್ರಾರಂಭದಲ್ಲಿ ನಿರಂತರವಾಗಿ ಸೋಲುತ್ತಿದ್ದ ಮುಂಬೈ ಇಂಡಿಯನ್ಸ್ ಇದೀಗ ಗೆಲುವಿನ ಹಳಿಗೆ ಮರಳಿದ್ದು ಪ್ಲೇ ಆಫ್ ಮಾರ್ಗದಲ್ಲಿ ಉಳಿದ ತಂಡಗಳಿಗೆ ಪೈಪೋಟಿ ನೀಡುವ ಎಲ್ಲಾ ಲಕ್ಷಣಗಳನ್ನು ಕಾಣುತ್ತಿದೆ. ಇದೇವೇಳೆ ಕಳೆದ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಒಟ್ಟಾರೆ ಟೂರ್ನಿಯಲ್ಲಿ 6ನೇ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲೂ ಕೊನೆ ಸ್ಥಾನದಲ್ಲಿ ಉಳಿದಿದೆ. ಭಾನುವಾರ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರು 2ನೇ ವಿಕೆಟ್ ಗೆ 113 ರನ್ ಗಳ ಜೊತೆಯಾಟವಾಡಿ ಚೆನ್ನೈ ಕೈಯಿಂದ ಗೆಲುವನ್ನು ಕಸಿದುಕೊಂಡರು.
MI Vs CSK – ರೋಹಿತ್ ಶರ್ಮಾ ಘರ್ಜನೆಗೆ ಬೆಚ್ಚಿಬಿದ್ದ ಚೆನ್ನೈ: ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲೂ ಮೇಲಕ್ಕೇರಿದ ಮುಂಬೈ
ಪ್ರಾರಂಭದಲ್ಲಿ ನಿರಂತರವಾಗಿ ಸೋಲುತ್ತಿದ್ದ ಮುಂಬೈ ಇಂಡಿಯನ್ಸ್ ಇದೀಗ ಗೆಲುವಿನ ಹಳಿಗೆ ಮರಳಿದ್ದು ಪ್ಲೇ ಆಫ್ ಮಾರ್ಗದಲ್ಲಿ ಉಳಿದ ತಂಡಗಳಿಗೆ ಪೈಪೋಟಿ ನೀಡುವ ಎಲ್ಲಾ ಲಕ್ಷಣಗಳನ್ನು ತೋರಿದೆ. ಇದೇವೇಳೆ ಕಳೆದ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಒಟ್ಟಾರೆ ಟೂರ್ನಿಯಲ್ಲಿ 6ನೇ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲೂ ಕೊನೇ ಸ್ಥಾನದಲ್ಲಿ ಉಳಿದಿದೆ. ಭಾನುವಾರ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರು 2ನೇ ವಿಕೆಟ್ ಗೆ 113 ರನ್ ಗಳ ಜೊತೆಯಾಟವಾಡಿ ಚೆನ್ನೈ ಕೈಯಿಂದ ಗೆಲುವನ್ನು ಕಸಿದುಕೊಂಡರು.
ಗೆಲುವಿಗೆ 177 ರನ್ ಗುರಿ ಪಡೆದ ಮುಂಬೈ ಇಂಡಿಯನ್ಸ್ ಕೇವಲ 1 ವಿಕೆಟ್ ಕಳೆದುಕೊಂಡು ಇನ್ನೂ 26 ಎಸೆತಗಳು ಬಾಕಿ ಉಳಿದಿರುವಂತೆ ಜಯಭೇರಿ ಬಾರಿಸಿತು. ಮುಂಬೈ ಇಂಡಿಯನ್ಸ್ ತಂಡದ ಪರ ರೋಹಿತ್ ಶರ್ಮಾ(76) ಮತ್ತು ಸೂರ್ಯಕುಮಾರ್ ಯಾದವ್ (68) ಅವರು ಮುರಿಯದ 2ನೇ ವಿಕೆಟ್ ಗೆ 113 ರನ್ ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರೋಹಿತ್ ಶರ್ಮಾ ಅವರು 45 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್ ಗಳನ್ನು ಒಳಗೊಂಡ ಅಜೇಯ 76 ರನ್ ಬಾರಿಸಿದರು. ಅದೇ ರೀತಿ ಸೂರ್ಯಕುಮಾರ್ ಯಾದವ್ ಅವರು 30 ಎಸೆತಗಳಿಂದ 6 ಬೌಂಡರಿ ಮತ್ತು 5 ಸಿಕ್ಸರ್ ಗಳನ್ನು ಒಳಗೊಂಡ ಅಜೇಯ 68 ರನ್ ಬಾರಿಸಿದರು.








