ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್ !!
IPL -2025
* ಪಂಜಾಬ್ಗೆ 11 ರನ್ಗಳಿಂದ ರೋಚಕ ಗೆಲುವು
* 3 ತಂಡಗಳನ್ನು ಮುನ್ನಡೆಸಿದ 5ನೇ ಆಟಗಾರ ಶ್ರೇಯಸ್ ಅಯ್ಯರ್
* ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆಗೆ ಗುರಿಯಾದ ಮ್ಯಾಕ್ಸ್ವೆಲ್
NAMMUR EXPRESS SPORTS NEWS
ಅಹಮದಾಬಾದ್: ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಜೊತೆಗೆ ಉತ್ತಮ ಬೌಲಿಂಗ್ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 11 ರನ್ಗಳಿಂದ ಗೆಲುವು ದಾಖಲಿಸಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ 5ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 5 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತ್ತು. ಬಿಗ್ ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ತಂಡವು 5 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
ಗುಜರಾತ್ ತಂಡದ ಪರ ಸಾಯಿ ಸುದರ್ಶನ್ 74 ರನ್, ನಾಯಕ ಶುಭನ್ ಗಿಲ್ 33 ರನ್, ಜೋಸ್ ಬಟ್ಲರ್ 54 ರನ್ ಹಾಗೂ ಶೆರ್ಫೇನ್ ರುದರ್ಫೋರ್ಡ್ 46 ರನ್ ಗಳಿಸಿದರು.
ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ತಂಡದ ಪರ ನಾಯಕ ಶ್ರೇಯಸ್ ಅಯ್ಯರ್ ಅಜೇಯ 97 ರನ್, ಪ್ರಿಯಾಂಶ್ ಆರ್ಯ 47 ರನ್ ಹಾಗೂ ಶಶಾಂಕ್ ಸಿಂಗ್ ಅಜೇಯ 44 ರನ್ ಗಳಿಸಿದ್ದರು. ಇನ್ನು ಗುಜರಾತ್ ಪರ ಸಾಯಿ ಕಿಶೋರ್ 3 ವಿಕೆಟ್ ಪಡೆದರೆ,ಕಗಿಸೋ,ರಬಾಡ ಹಾಗೂ ರಶೀದ್ ಖಾನ್ ತಲಾ 1 ವಿಕೆಟ್ ಪಡೆದರು.
* 3 ತಂಡಗಳನ್ನು ಮುನ್ನಡೆಸಿದ 5ನೇ ಆಟಗಾರ ಶ್ರೇಯಸ್ ಅಯ್ಯರ್
ಐಪಿಎಲ್ 2025 ರಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್, ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಮುನ್ನಡೆಸಿದ ಐದನೇ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.
ಮಂಗಳವಾರ ಗುಜರಾತ್ ವಿರುದ್ಧ ಪಿಬಿಕೆಎಸ್ ನಾಯಕತ್ವಕ್ಕೆ ಪಾದಾರ್ಪಣೆ ಮಾಡುವ ಮೊದಲು, ಅಯ್ಯರ್ ಐಪಿಎಲ್ನಲ್ಲಿ 41 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೆಕೆಆರ್ ಅನ್ನು 29 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಮಹೇಲ ಜಯವರ್ಧನೆ, ಕುಮಾರ್ ಸಂಗಕ್ಕಾರ, ಸ್ಟೀವ್ ಸ್ಮಿತ್ ಮತ್ತು ಅಜಿಂಕ್ಯ ರಹಾನ ಐಪಿಎಲ್ನಲ್ಲಿ ತಲಾ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ.
* ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆಗೆ ಗುರಿಯಾದ ಮ್ಯಾಕ್ಸ್ವೆಲ್
ಪಂಜಾಬ್ ಕಿಂಗ್ಸ್ನ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆಯೊಂದಕ್ಕೆ ಗುರಿಯಾಗಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ 5ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ದ ಗೋಲ್ಡನ್ ಡಕ್ಗೆ ಔಟಾದರು. ಇದು ಐಪಿಎಲ್ನಲ್ಲಿ ಮ್ಯಾಕ್ಸ್ವೆಲ್ ಅವರ 19ನೇ ಡಕ್ ಆಗಿದೆ. ಇದು ಐಪಿಎಲ್ ಇತಿಹಾಸದಲ್ಲಿ ಒಬ್ಬ ಬ್ಯಾಟರ್ ದಾಖಲಿಸಿದ ಅತಿ ಹೆಚ್ಚು ಡಕ್ ಆಗಿದೆ. ಅವರ ನಂತರದ ಸ್ಥಾನದಲ್ಲಿ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ತಲಾ 18 ಡಕ್ಗಳನ್ನು ದಾಖಲಿಸಿದ್ದಾರೆ.








