ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
ಐಪಿಎಲ್ -2025
* ಕೊನೆಗೂ ತವರಲ್ಲಿ ಗೆಲುವಿನ ಚಾಲೆಂಜ್ ಗೆದ್ದ ಆರ್ಸಿಬಿ
* ಕೊಹ್ಲಿ ಅದ್ಭುತ ಬ್ಯಾಟಿಂಗ್,ಹೇಜಲ್ ವುಡ್ ಮಾಂತ್ರಿಕ ಬೌಲಿಂಗ್
NAMMMUR EXPRESS SPORTS NEWS
ಬೆಂಗಳೂರು: ತವರಲ್ಲಿ ಒಂದೂ ಪಂದ್ಯ ಗೆಲ್ಲದೇ ಗೆಲುವಿಗಾಗಿ ಹಾತೊರೆಯುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್ಆರ್) ವಿರುದ್ಧ 11 ರನ್ಗಳ ರೋಚಕ ಗೆಲುವು ಸಾಧಿಸಿ ತವರಿನಲ್ಲಿ ಗೆಲುವಿನ ಬರ ನೀಗಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 70 ರನ್ ಮತ್ತು ದೇವದತ್ ಪಡಿಕ್ಕಲ್ 27 ಎಸೆತಗಳಲ್ಲಿ 50 ರನ್ಗಳ ಅದ್ಭುತ ಅರ್ಧಶತಕಗಳ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ಗೆ 205 ರನ್ಗಳ ಬೃಹತ್ ಮೊತ್ತ ದಾಖಲಿಸಿತು. ಎರಡನೇ ವಿಕೆಟ್ಗೆ ಈ ಜೋಡಿ 95 ರನ್ಗಳ ಅದ್ಭುತ ಜೊತೆಯಾಟವಾಡಿತು. ರಾಜಸ್ಥಾನ್ ಪರ ಸಂದೀಪ್ ಶರ್ಮಾ 45 ರನ್ ನೀಡಿ 2 ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶಿಸಿದರು.
ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಹಲವು ಬಾರಿ ಪಂದ್ಯದ ಮೇಲೆ ಹಿಡಿತ ಸಾಧಿಸಿತಾದರೂ, ಆರ್ಸಿಬಿ ಬೌಲರ್ಗಳಾದ ಜೋಶ್ ಹೇಜಲ್ ವುಡ್ (4/33) ಮತ್ತು ಕೃನಾಲ್ ಪಾಂಡ್ಯ (2/31) ಅವರ ಶಿಸ್ತುಬದ್ಧ ಬೌಲಿಂಗ್ ರಾಜಸ್ಥಾನ್ ತಂಡವನ್ನು 194 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು.
ಈ ಗೆಲುವು ಆರ್ಸಿಬಿಯ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ತಂಡವು ಮುಂದಿನ ಪಂದ್ಯಗಳಲ್ಲಿ ಇದೇ ಉತ್ತಮ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದೆ.








