ಸೂರ್ಯ ಕುಮಾರ್ ಇಂಡಿಯಾ ಕ್ಯಾಪ್ಟನ್: ಕಾಪು ಮಾರಿಯಮ್ಮ ಕೃಪೆ!?
– ಮಾರಿಯಮ್ಮನ ಆಶೀರ್ವಾದ ಪಡೆದಿದ್ದ ದಂಪತಿ
– ಟಿ20 ಸರಣಿಗೆ ಸೂರ್ಯಕುಮಾರ್ ನಾಯಕನಾಗಿ ಆಯ್ಕೆ
– ಜು.8ರಂದು ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ
NAMMUR EXPRESS NEWS
ಮುಂಬಯಿ: ಟೀಮ್ ಇಂಡಿಯಾದ ಹಾರ್ಡ್ ಹಿಟ್ಟರ್ ಸೂರ್ಯಕುಮಾರ್ ಯಾದವ್ ಇದೀಗ ಇಂಡಿಯಾ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ.ಮೂಲತಃ ಕರಾವಳಿ ಮೂಲದ ಸೂರ್ಯಕುಮಾರ್ ಪತ್ನಿ ದೇವಿಶಾ ಶೆಟ್ಟಿ ಜತೆಗೂಡಿ ಜುಲೈ 8ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದರು. ಈ ಸಂದರ್ಭ ದೇವಸ್ಥಾನದ ಅರ್ಚಕರು “ಸೂರ್ಯಕುಮಾರ್ ಅವರಿಗೆ ನಾಯಕರಾಗುವ ಭಾಗ್ಯ ದೊರಕಲಿ” ಎಂದು ಹಾರೈಸಿ ಪ್ರಸಾದ ನೀಡಿದ್ದರು. ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಟಿ20ಗೆ ಖಾಯಂ ನಾಯಕನಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
ಸೂರ್ಯ ಅವರಿಗೆ ನಾಯಕತ್ವ ಒಲಿದದ್ದು ಕಾಪು ಮಾರಿಗುಡಿಯ ಮಾರಿಯಮ್ಮ ದೇವಿಯ ಆಶೀರ್ವಾದದಿಂದಲೇ ಎಂದು ಕೆಲ ನೆಟ್ಟಗರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಹೊಸ ಮಾರಿಗುಡಿಯ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದ ಸೂರ್ಯಕುಮಾರ್ ಮುಖಮಂಟಪದ ಶಿಲಾಸ್ತಂಭ ಸಹಿತ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಿದ್ದರು. ಇದೇ ವೇಳೆ ಸೂರ್ಯ ಪತ್ನಿ, ನೂತನ ದೇಗುಲ ಉದ್ಘಾಟನೆಯ ವೇಳೆ ಬಿಡುವುದ್ದರೆ ಸೂರ್ಯ ಖಂಡಿತವಾಗಿಯೂ ಇಲ್ಲಿಗೆ ಬರಲಿದ್ದಾರೆ ಎಂದು ಹೇಳಿದ್ದರು. ದೇವಿಶಾ ಶೆಟ್ಟಿ ಅವರು ಉಡುಪಿಯ ಕಾಪು ಮೂಲದವರಾಗಿದ್ದಾರೆ. ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ.
ಕಳೆದ ಒಂದು ವರ್ಷಗಳಿಂದ ರೋಹಿತ್ ಬಳಿಕ ಹಾರ್ದಿಕ್ ಪಾಂಡ್ಯರನ್ನೇ ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಲಂಕಾ ಸರಣಿಗೆ ಸೂರ್ಯಕುಮಾರ್ಗೆ ನಾಯಕತ್ವ ನೀಡಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಮುಂದುವರಿಸುವ ಸಾಧ್ಯತೆ ಅಧಿಕವಾಗಿದೆ.
ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್