Categories
ಅಪರಾಧ

ಬಾಲಕಿ ರೇಪ್: ಪೊಲೀಸ್ ಅಧಿಕಾರಿ ಅರೆಸ್ಟ್!

 

ಬಾಲಕಿ ರೇಪ್: ಪೊಲೀಸ್ ಅಧಿಕಾರಿ ಅರೆಸ್ಟ್!
– 9ನೇ ತರಗತಿ ಬಾಲಕಿಯ ಬದುಕು ತೆಗೆದ ಪೊಲೀಸ್ ಅಧಿಕಾರಿ
– ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ

NAMMUR EXPRESS NEWS
ಕೊಚ್ಚಿ: ಬಾಲಕಿಯೊಬ್ಬಳು ಗರ್ಭ ಧರಿಸಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.
ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ.
ಬಂಧಿತರನ್ನು ಮರಯೂರ್ ಠಾಣಾ ಸಿಪಿಒ ದಿಲೀಪ್ (43) ಎಂದು ಗುರುತಿಸಲಾಗಿದೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ ಬಂದಿದೆ. ಆಕೆಯನ್ನು ವಿಚಾರಿಸಿದಾಗ ತನ್ನ ದೂರದ ಸಂಬಂಧಿಯೇ ಆಗಿರುವ ಆರೋಪಿ ದಿಲೀಪ್ ಕಾಮಕಾಂಡವನ್ನು ಬಿಚ್ಚಿಟ್ಟಿದ್ದು, ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ದಂಧೆ!

ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ವಿನೋಬನಗರ ಸ್ಪಾಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂತ್ರಸ್ತ ಯುವತಿಯರ ರಕ್ಷಣೆ ಮಾಡಲಾಗಿದೆ.
ವಿನೋಬನಗರದಲ್ಲಿರುವ ಸ್ಪಾ ಮೇಲೆ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಬಿಂದು ಮಣಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಲ್ಲಿದ್ದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ದಾಖಲೆಗಳು ಲಭ್ಯವಾಗಿದೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.