ರಾಜ್ಯದಲ್ಲಿ ಹಲವು ದಾಳಿಗೆ ಉಗ್ರರ ಪ್ಲಾನ್?!
– ರಾಷ್ಟ್ರೀಯ ತನಿಖಾ ದಳದ ಮಹತ್ವದ ತನಿಖೆ
– ರೋಬೋಟ್ ತಂತ್ರಜ್ಞಾನ ಬಳಸಿ ದಾಳಿಗೆ ಟ್ರೇನಿಂಗ್
– ಸೆಕ್ಯೂರಿಟಿ ಗಾರ್ಡನ್ನೇ ಕೊಲೆ ಮಾಡುತ್ತಿದ್ದ ಮೆಂಟಲ್!
NAMMUR EXPRESS NEWS
ಮಂಗಳೂರು: ರಾಜ್ಯದಲ್ಲಿ ಐಸಿಸ್ ಉಗ್ರರು ಹಲವು ಉಗ್ರ ದಾಳಿ ಮಾಡಲು ಪ್ಲಾನ್ ಮಾಡಿದ್ದರು ಎಂಬ ಮಾಹಿತಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತನಿಖೆಯಿಂದ ಬೆಳಕಿಗೆ ಬಂದಿದೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ಲಾನ್ ಮಾಡಿದ್ದ ಉಗ್ರರು ತಮ್ಮ ಪ್ಲಾನ್ ಬಾಯಿ ಬಿಟ್ಟಿದ್ದಾರೆ.
ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿದ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಚು ರೂಪಿಸಿತ್ತು ಎಂಬ ಸ್ಫೋಟಕ
ಮಾಹಿತಿ ರಾಷ್ಟ್ರೀಯ ತನಿಖಾದಳದ ಚಾರ್ಜ್ ಶೀಟ್ ನಿಂದ ಬಯಲಾಗಿದೆ. ಈ ಬಗ್ಗೆ ಶಂಕಿತ ಉಗ್ರರು ವಿಚಾರಣೆ ಸಂದರ್ಭ ಬಾಯ್ದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಂಕಿತ ಉಗ್ರ ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರಿಕ್ ಸೇರಿದಂತೆ 9 ಜನರ ವಿರುದ ಚಾರ್ಜ್ ಶೀಟ್ಸಲ್ಲಿಸಲಾಗಿದೆ.
ಮೆಕಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿರುವ ಬಂಧಿತ ಶಂಕಿತ ಉಗ್ರರಾಗಿರುವ ಮೊಹಮ್ಮದ್ ಶಾರಿಕ್ (25), ಮಾಜ್ ಮುನೀರ್ ಅಹ್ಮದ್ (23), ಸೈಯದ್ ಯಾಸಿನ್ (22), ರೀಶಾನ್ ತಾಜುದ್ದೀನ್ ಶೇಖ್ (22), ಹುಜೈರ್ ಫರ್ಹಾನ್ ಬೇಗ್ (22), ಮಜಿನ್ ಅಬ್ದುಲ್ ರಹಮಾನ್ (22), ನದೀಮ್ ಅಹ್ಮದ್ (22), ಜಬೀವುಲ್ಲಾ (32) ಮತ್ತು ನದೀಮ್ ಫೈಝಲ್ ಎನ್ (27) ಅವರ ತೀವ್ರ ವಿಚಾರಣೆ ವೇಳೆ ಈ ಸತ್ಯ ಬಾಯಿಬಿಟ್ಟಿದ್ದಾರೆ.
ಐಸಿಸ್ ಹ್ಯಾಂಡ್ಲರ್ ರೋಬೋಟಿಕ್ ಕೋರ್ಸ್ ಓದುವಂತೆ ನಿರ್ದೇಶನ ನೀಡಿದ್ದರು. ಈ ಮೂಲಕ ಭವಿಷ್ಯದ ಭಯೋತ್ಪಾದಕ ಚಟುವಟಿಕೆಗಳಿಗೆ ತಯಾರಾಗುವಂತೆ ತಿಳಿಸಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಮೂಲಕ ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ರೊಂದಿಗೆ ನೇರ ಸಂಪರ್ಕದಲ್ಲಿದ್ದ ಶಂಕಿತರು ಇದ್ದರು ಎಂದು ತಿಳಿದುಬಂದಿದೆ.
ಸೆಕ್ಯೂರಿಟಿ ಗಾರ್ಡ್ ಹುಡುಕಿ ಕೊಲೆ!
ಒಂಟಿ ಸೆಕ್ಯುರಿಟಿ ಗಾರ್ಡ್ ಗಳನ್ನು ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್ನನ್ನು ಆರ್. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್ ಕೊಲೆ ಆರೋಪಿ. ಆರೋಪಿ ತೌಸೀಪ್ ವಿಚಿತ್ರ ಸೈಕೋಪಾತ್ ಆಗಿದ್ದು ಹಲವು ಪೋಲಿಸ್ ಠಾಣೆಗಳಿಗೆ ಬೇಕಾಗಿದ್ದ. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈತ ನಸುಕಿನ ಜಾವ ಎರಡಿಂದ ಮೂರು ಗಂಟೆ ಅವಧಿಯಲ್ಲಿ ಒಂಟಿ ಸೆಕ್ಯುರಿಟಿ ಗಾರ್ಡ್ಗಳನ್ನು ಹುಡುಕಿ ಕೊಲ್ಲುತ್ತಿದ್ದನು.
ಸೊಲ್ಯುಶನ್ ಹಾಗೂ ಡ್ಯಾಗರ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗುತ್ತಿದ್ದನು. ಹಲವು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದವು. ಈ ಹಿನ್ನೆಲೆ ಮೂರು ದಿನಗಳ ಕಾಲ ಹಗಲು ರಾತ್ರಿ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಕೊನೆಗೆ ಆರ್.ಟಿ ನಗರ 80 ಅಡಿ ರೋಡ್ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
ಈತ ಈಗಾಗಲೇ ಆರ್.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್ಗಳನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಮನೆ ಬಳಿಯೂ ಸೆಕ್ಯುರಿಟಿಗೆ ಚಾಕುವಿನಿಂದ ಕೊಲೆಗೈದಿದ್ದ.
ದಂಡ ಕಟ್ಟಲಾಗದೆ ಠಾಣೆಯಿಂದ ಎಸ್ಕೆಪ್ ಆಗಿದ್ದ ಚಾಲಕ ಶವವಾಗಿ ಪತ್ತೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಠಾಣೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಲಾರಿ ಚಾಲಕ ಬಸವಂತಕುಮಾರ್ (37) ಎಂದು ತಿಳಿದುಬಂದಿದೆ. ಈತ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು.
ಸಂಚಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಸಂಚಾರಿ ಪೊಲೀಸರು ಲಾರಿ ತಡೆಹಿಡಿದು ಲಾರಿ ಸಮೇತ ಚಾಲಕನನ್ನು ಪೊಲಿಸ್ ಠಾಣೆಗೆ ಕರೆತಂದಿದ್ದರು. ಆದರೆ ದಂಡ ಕಟ್ಟಲು ಹಣವಿಲ್ಲದೆ ಬಸವಂತಕುಮಾರ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ.
ಚಾಲಕನ ಪತ್ತೆಗಾಗಿ ಎಸ್ಪಿ ಕಚೇರಿ ಬಳಿ ಮೃತನ ಪೋಷಕರು ಪ್ರತಿಭಟನೆ ನಡೆಸಿದ್ದರು. ಪತ್ತೆ ಹಚ್ಚುವ ಪ್ರಯತ್ನ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ, ಬಸವಂತ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ..
ಕಾರು ಪಲ್ಟಿಯಾಗಿ ವೈದ್ಯರ ಸಾವು!
ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಯುವ ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡ ರಾತ್ರಿ ಮಣಿಪಾಲ ಠಾಣಾ ವ್ಯಾಪ್ತಿ ನಡೆದಿದೆ.
ಮೃತರು ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಮೂಳೆ ತಜ್ಞ ಡಾಕ್ಟರ್ ಸೂರ್ಯ ನಾರಾಯಣ ಯಾನೆ ಡಾಕ್ಟರ್ ಸೂರಿ(26) ಎಂದು ಗುರುತಿಸಲಾಗಿದೆ.
ಹೋಟೆಲ್ ಹಾಟ್ ಅಂಡ್ ಸ್ಟೈಸಿ ಎದುರುಗಡೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರ್ ಮೊದಲು ರಸ್ತೆ ವಿಭಜಕೆ ಡಿಕ್ಕಿ ಹೊಡೆದು ನಂತರ 3 ಪಲ್ಟಿಯಾಗಿದ್ದು ಡಾಕ್ಟರ್ ಸೂರ್ಯನಾರಾಯಣ ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲಿ ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಮತ್ತಿಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು ಪ್ರಾಣಪಾಯದಿಂದ ಪರಾಗಿದ್ದಾರೆ ಎಂದು ಮಣಿಪಾಲ ಇನ್ಸೆಕ್ಟರ್ ತಿಳಿಸಿದ್ದಾರೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023