ನಾಳೆಯಿಂದಲೇ ಮಂಗಳೂರು-ಮೂಡುಬಿದಿರೆ- ಕಾರ್ಕಳ ರಸ್ತೆಗೆ ಸರಕಾರಿ ಬಸ್?
– ನಾಳೆಯಿಂದಲೇ ನಾಲ್ಕು ಬಸ್ ಗಳು ಓಡಾಡಲಿದೆ!
– ‘ ನಾಳೆಯಿಂದಲೇ ಬಸ್ ಸಂಚಾರ’ ಪ್ರಾರಂಭಿಸುತ್ತೇವೆ- ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು
NAMMUR EXPRESS NEWS
ಮಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು- ಮೂಡುಬಿದಿರೆ- ಕಾರ್ಕಳ ರಸ್ತೆಯಲ್ಲಿ ನಾಳೆಯಿಂದಲೇ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ. ವಿಧಾನಸಭಾಧಿವೇಶನದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಈ ಬಗ್ಗೆ ಪ್ರಸ್ತಾಪಿಸಲು ಮುಂದಾದಾಗ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ‘ ನಾಳೆಯಿಂದಲೇ ಬಸ್ ಸಂಚಾರ’ ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ರಾಜ್ಯ ಸರಕಾರದ ಈ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕಾಗಿ ಧ್ವನಿ ಎತ್ತಿದ್ದರು.ಇದೀಗ ಉಮಾನಾಥ ಕೋಟ್ಯಾನ್ ಅವರು ಕೂಡಾ ಈ ಬಗ್ಗೆ ಪ್ರಸ್ತಾಪಿಸಿರುವುದರಿಂದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ. ಈ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ಆರಂಭಿಸಬೇಕೆಂದು ಅರುಣ್ ಶೆಟ್ಟಿ ಸಹಿತ ಈ ಭಾಗದ ವಿದ್ಯಾರ್ಥಿಗಳು, ಸಾರ್ವಜನಿಕರ ಆಗ್ರಹವಿತ್ತು.ಕೆ.ಎಸ್.ಆರ್.ಟಿ.ಸಿ.ಯಿಂದ ಮಂಜೂರಾತಿ ದೊರಕಿದ್ದರೂ ಅದು ಸ್ಥಗಿತಗೊಂಡಿತ್ತು.ಇದೀಗ ನಾಳೆಯಿಂದಲೇ ನಾಲ್ಕು ಬಸ್ ಗಳು ಓಡಾಡಲಿದೆ ಎಂದು ಹೇಳಲಾಗುತ್ತಿದೆ.